ಕುಂದಾಪುರದಲ್ಲಿ ತಾಲೂಕುಮಟ್ಟದ ಸ್ವೀಪ್‌ ಕಾರ್ಯಕ್ರಮ

ಕುಂದಾಪುರ : ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಇವರ ಸಹಯೋಗದಲ್ಲಿ ಮತದಾರರಿಗೆ ಅರಿವು ಮೂಡಿಸುವ ಸ್ವೀಪ್‌ ಕಾರ್ಯಕ್ರಮ ಜರುಗಿತು

ಜಿ.ಪಂ.ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿಯ ಅಧ್ಯಕ್ಷ ಕನಕವಲ್ಲಿ ಅವರು ಪ್ರತಿಜ್ಞಾವಿಧಿ ಬೋಧಿಸಿ ನಗಾರಿ ಭಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಎ.17ರಮದು ಲೋಕಸಭೆಗೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದರು. ಜಿ.ಪಂ.ಮುಖ್ಯ ಯೋಜನಾಧಿಕಾರಿ ವಿಜಯಕುಮಾರ್‌ ಉಪಸ್ಥಿತರಿದ್ದು, ಮತದಾರರಿಗೆ ಮತಹಾಕುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಂದಾಪುರ ತಹಶೀಲ್ದಾರ್‌ ಗಾಯತ್ರಿ ನಾಯಕ್‌, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಡಾಲ್ಪಸ್‌ ಫೆರ್ನಾಂಡಿಸ್‌, ತಾಲೂಕು ಮಟ್ಟದ ಅಧಿಕಾರಿಗಳಾದ ಲೋಕೋಪಯೋಗಿಯ ಬಸವಲಿಂಗೇಗೌಡ, ಚಂದ್ರಶೇಖರ್‌, ಆರೋಗ್ಯಾಧಿಕಾರಿ ಡಾ|ಚಿದಾನಂದ, ಸಹಾಯಕ ಕೃಷಿ ಅಧಿಕಾರಿ ರಾಮದಾಸ ರೈ, ಮಹಿಳಾ ಮತ್ತು ಶಿಶು ಕಲ್ಯಾಣಾಧಿಕಾರಿ ಭಾಗಿರಥಿ ಹೆಬ್ಟಾರ್‌, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಎಚ್‌.ಸೋಮಶೇಖರ್‌, ಜಲಾನಯನ ಅಧಿಕಾರಿ ರಘುರಾಮ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಯುವಜನ ಸೇವಾ ಕ್ರೀಡಾ ಇಲಾಖೆಯ ದಿನಕರ ಹೆಗ್ಡೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಕಾರ್ಯರ್ಶಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಹಾಗà ಸಿಬ್ಬಂದಿಬರ್ಗದವರು ಭಾಗವಹಿಸಿದ್ದರು.

ಆರಂಭದಲ್ಲಿ ಕುಂದಾಪುರ ಗಾಂಧಿಮೈದಾನದಲ್ಲಿ ಮೆರವಣಿಗೆಯ ಮೂಲಕ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾರರಿಗೆ ಮತ ಹಾಕಲು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದ್ದರು. ಸುಮಾರು 2000 ಮಂದಿ ಈ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com