ಸುಸ್ಥಿರತೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಮಂಜುನಾಥ ಭಂಡಾರಿ

ವಂಡ್ಸೆ: ಸುಸ್ಥಿರತೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶವನ್ನು ಸಬಲವಾಗಿ ಕಟ್ಟಿದ ಕಾಂಗ್ರೆಸ್‌ಗೆ ಯಾರ ಬೋಧನೆಯೂ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. 

ವಂಡ್ಸೆಯಲ್ಲಿ ಜರುಗಿದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿ ದರು. ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ದೇಶಕ್ಕೆ ಯಾವ ಕೊಡುಗೆ ನೀಡಿಲ್ಲ. ಭ್ರಷ್ಟರನ್ನು, ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕುಳ್ಳಿರಿಸಿಕೊಂಡು ಓಟು ಕೇಳುವ ಮೋದಿ ದೇಶ ಮುನ್ನಡೆಸಲು ಶಕ್ತರೇ ಎಂದು ಪ್ರಶ್ನಿಸಿದರು. ಮುಖಂಡರಾದ ಶೋಭಾ ವಾಂಜೆ, ಮಂಜುಳಾ ನಾಯ್ದು, ಶಿವಾನಂದ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com