ಎ. 22-23: ಲೋಕಾಯುಕ್ತ ದೂರು ಸ್ವೀಕಾರ

ಉಡುಪಿ: ಲೋಕಾಯುಕ್ತ ಪೊಲೀಸರು ಉಡುಪಿ ಜಿಲ್ಲೆಯಲ್ಲಿ ಎ. 22 ಮತ್ತು 23ರಂದು ಸಾರ್ವಜನಿಕರಿಂದ ಲಿಖೀತ ದೂರು ಸ್ವೀಕಾರ ಮಾಡಲಿದ್ದಾರೆ.

ಎ. 22ರ ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಉಡುಪಿ ತಾಲೂಕು ಕಚೇರಿ, ಅದೇ ದಿನ ಅಪರಾಹ್ನ 3ರಿಂದ 4.30ರ ವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿ ಹಾಗೂ ಎ. 23ರ ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತರು ಅರ್ಜಿ ಸ್ವೀಕರಿಸಲಿರುವರು. ಈ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಉಡುಪಿ ಘಟಕದ ಪ್ರಭಾರ ಡಿವೈಎಸ್‌ಪಿ ಉಮೇಶ್‌ ಜಿ. ಶೇಟ್‌ ಪಾಲ್ಗೊಳ್ಳಲಿರುವರು.

ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫೀದವಿತ್‌ ಮಾಡಿಸಿ, ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು.

ಸಾರ್ವಜನಿಕರಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಮೋಹನ್‌ ಕೊಟ್ಟಾರಿ (9449820536) ಅಥವಾ ಕೃಷ್ಣಾನಂದ ಜಿ. ನಾಯ್ಕ (9448584667), ಉಡುಪಿ ಕಚೇರಿ (0820-2536661) ಅವರನ್ನು ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com