ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ನೂತನ ಬೆಳ್ಳಿರಥ ಸಮರ್ಪಣೆ

ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ನೂತನ ಬೆಳ್ಳಿರಥವನ್ನು ಬೆಳಿಗ್ಗೆ 7 ಗಂಟೆಗೆ  ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಪೇಟೆ ಶ್ರೀ ವೆಂಕಟರಮಣ ದೇವರಿಗೆ ಸಮರ್ಪಿಸಿದರು. ಆ ಬಳಿಕ ಬೆಳ್ಳಿರಥೋತ್ಸವ ಪುರ ಮೆರವಣಿಗೆ ಜರುಗಿತು.
    

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಕೆ.ರಾಧಾಕೃಷ್ಣ ಶೆಣೈ, ಜೊತೆ ಮೊಕ್ತೇಸರರಾದ ಕೋಡಿ ಶ್ರೀನಿವಾಸ ಶೈಣೈ ಹಾಗೂ ಮಾಳಪ್ಪ ಪೈ ಮೊದಲಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com