ಮಹಿಳೆ ಜತೆ ಅನುಚಿತ ವರ್ತನೆ: ಆರೋಪಿಗೆ ಜಾಮೀನು

ಕುಂದಾಪುರ: ಬಸ್ಸಿನಲ್ಲಿ ಪಯಣಿಸುತ್ತಿದ್ದ ಸಂದರ್ಭ ಪಕ್ಕದ ಸೀಟಿನ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಬಂಧಿತರಾಗಿದ್ದ ಶಂಕರನಾರಾಯಣ ಪೊಲೀಸ್ ಠಾಣೆಯ ಎಎಸ್‌ಐ ದೇವರಾಜ್ ಅವರಿಗೆ ಕುಂದಾಪುರ ನ್ಯಾಯಾಲಯ ಶರ್ತಬದ್ಧ ಜಾಮೀನು ನೀಡಿದೆ. 

ಜೂ.17ರಂದು ರಾತ್ರಿ ಗಂಗೊಳ್ಳಿಯಲ್ಲಿರುವ ತಮ್ಮ ಮನೆಗೆ ಬಸ್ಸಿನಲ್ಲಿ ಹೋಗುತ್ತಿರುವ ಸಂದರ್ಭ ಬಾವಿಕಟ್ಟೆ ಸಮೀಪ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ದೂರು ದಾಖಲಾಗಿತ್ತು. ತಡರಾತ್ರಿ ಬಂಧನಕ್ಕೊಳಪಟ್ಟ ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಶುಕ್ರವಾರ ಇಲ್ಲಿನ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ವಿಜೇತ ಪಿಂಕಿ ಡೇಸಾ ಶರ್ತಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದಾರೆ. 

10 ಸಾವಿರ ಬಾಂಡ್ ಭದ್ರತೆ ನೀಡಬೇಕು. ಪ್ರತಿ ತಿಂಗಳ 2 ಭಾನುವಾರ ಗಂಗೊಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ಜಾಮೀನು ಅವಧಿಯಲ್ಲಿ ದೂರುದಾರರಿಗೆ ತೊಂದರೆ ನೀಡಬಾರದು ಎಂದು ತೀರ್ಪಿನಲ್ಲಿ ಆದೇಶಿಸಿದ್ದಾರೆ. ಆರೋಪಿ ಎಎಸ್‌ಐ ದೇವರಾಜ್ ಜಾಮೀನು ಕೋರಿ ಕುಂದಾಪುರ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com