ಕೇಂದ್ರ ಸಚಿವ ಗೋಪಿನಾಥ್‌ ಮುಂಡೆ ಇನ್ನಿಲ್ಲ

ದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗೋಪಿನಾಥ್‌ ಮುಂಡೆ ಅವರು ಮಂಗಳವಾರ ಕಾರು ಅಪಘಾತದಲ್ಲಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಸಜ್ಜನ ರಾಜಕಾರಣಿ ಎನಿಸಿಕೊಂಡಿದ್ದ ಅವರಿಗೆ 65 ವರ್ಷ ಪ್ರಾಯವಾಗಿತ್ತು.
     ಮಂಗಳವಾರ ಬೆಳಗ್ಗೆ 6 .30ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ವಿಮಾದ ನಿಲ್ದಾಣಕ್ಕೆ ಮುಂಡೆ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಇಂಡಿಕಾ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದರು.  ಅಪಘಾತವಾದ ತಕ್ಷಣ ಅವರನ್ನು ಸಫ‌ರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಯಿತಾದರು ಹೆಚ್ಚಿನ ಚಿಕಿತ್ಸೆ ಅಗತ್ಯವಾದುದರಿಂದ ಕೂಡಲೆ ಎಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು.
     ಚಿಕಿತ್ಸೆ ಫ‌ಲಕಾರಿಯಾಗದೆ ಸುಮಾರು 8 ಗಂಟೆಯ ವೇಳೆಗೆ ಎಮ್ಸ್‌ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮುಂಡೆ ಕೊನೆಯುಸಿರು ಎಳೆದರು. ಮುಂಬಯಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com