20,21ರಂದು 9ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ: ಜಿಲ್ಲಾ ಕಸಾಪ ಆಶ್ರಯದಲ್ಲಿ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 20, 21ರಂದು ಉಡುಪಿಯ ಪೂರ್ಣಪ್ರಜ್ಞಾ ಸಭಾಂಗಣದ ವಿಭುದೇಶ ತೀರ್ಥ ವೇದಿಕೆಯಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಮಾಹಿತಿ ನೀಡಿದರು. ಜೂನ್ 20ರಂದು ಬೆಳಗ್ಗೆ 10 ಗಂಟೆಗೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. 9.30ಕ್ಕೆ ಸಮ್ಮೇಳನಾಧ್ಯಕ್ಷ ಪ್ರೊ. ರಾಮದಾಸ್ ಅವರನ್ನು ಪಿಪಿಸಿ ಕಾಲೇಜಿನಿಂದ ಸಭಾಂಗಣದವರೆಗೆ ಮೆರವಣಿಗೆಯಲ್ಲಿ ಕರೆತರಲಾಗುವುದು. ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದರು. 

ಪುಸ್ತಕ ಮಳಿಗೆಯನ್ನು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಚಿತ್ರಕಲಾ ಪ್ರದರ್ಶನವನ್ನು ಉದ್ಯಮಿ ಗೋಪಾಲ ಸಿ. ಬಂಗೇರ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಹೊರತಂದಿರುವ 20 ಕಿರು ಪುಸ್ತಕಗಳನ್ನು ರಾಜ್ಯ ಕಸಾಪ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಮಾಡಲಿದ್ದಾರೆ. ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ, ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಕೆ. ರಘುಪತಿ ಭಟ್, ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ವಾರ್ತಾಧಿಕಾರಿ ರೋಹಿಣಿ ಉಪಸ್ಥಿತರಿರುವರು. 

ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ , ಪ್ರ.ಸಂ. ಪ್ರೊ. ಉಪೇಂದ್ರ ಸೋಮಯಾಜಿ, ಸಂಚಾಲಕ ಮುರಳಿ ಕಡೆಕಾರ್, ಕೋಶಾಧಿಕಾರಿ ಸುಬ್ರಹ್ಮಣ್ಯ ಬಾಸ್ರಿ, ಉಪಾಧ್ಯಕ್ಷರುಗಳಾದ ಗೋಪಾಲ ಸಿ.ಬಂಗೇರ, ವಿ.ಜಿ.ಶೆಟ್ಟಿ , ವಲೇರಿಯನ್ ಮಿನೇಜಸ್ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com