ಗಂಗೊಳ್ಳಿ: ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಗಂಗೊಳ್ಳಿ: ತನ್ನಲ್ಲಿರುವ ಆಂತರಿಕ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ ಪ್ರತಿಯೊಬ್ಬರೂ ಕೂಡ ಮಹತ್ತರ ವ್ಯಕ್ತಿಗಳಾಗಲು ಸಾಧ್ಯವಿದೆ. ನಮ್ಮ ನಮ್ಮ ಶಕ್ತಿ ಸಾಮರ್ಥ್ಯಗಳ ಅರಿವು ನಮಗಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ನಾವು ಉತ್ತಮವಾಗಿ ಬೆಳೆಯಬೇಕು ಎನ್ನುವ ಬಗೆಗೆ ನಮ್ಮಲ್ಲಿ ಮನಸ್ಸು ಛಲ ಮೊದಲು ಮೂಡಬೇಕು ಆ ನಿಟ್ಟಿನಲ್ಲಿ ನಿರಂತರ ಶ್ರಮ ನಮ್ಮದಾಗಬೇಕು ಎಂದು ನಿವೃತ್ತ ಸಿಂಡಿಕೇಟ್ ಬ್ಯಾಂಕ್ ವಲಯ ಪ್ರಬಂಧಕರಾದ ಎಚ್ ಪಾಂಡುರಂಗ ನಾಯಕ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವ್ಯಕ್ತಿತ್ವ ವಿಕಸನ ಕುರಿತಾದ ಕಲಿಕೆ ಮತ್ತು ಬೆಳವಣಿಗೆ ಏನು? ಹೇಗೆ? ಎನ್ನುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
      ಕಲಿಕೆಯಲ್ಲಿ ಆಸಕ್ತಿ ಇಲ್ಲದಿದ್ದಲ್ಲಿ ಯಾವ ವಿಷಯಗಳು ನೆನಪಿರಲು ಸಾಧ್ಯವಿಲ್ಲ. ನೆನಪಿರಬೇಕಾದಲ್ಲಿ ಪಾಠ ಕೇಳುವ ಶ್ರದ್ಧೆ ಆಸಕ್ತಿ, ಪುನರ್ ಮನನ ಪ್ರಶ್ನಿಸುವ ಮನೋಭಾವ ನಮ್ಮದಾಗಬೇಕು ಎಂದು ಅವರು ಹೇಳಿದರು.
      ಕಾಲೇಜಿನ ಪ್ರಾಂಶುಪಾಲರಾದ ಆರ್ ಎನ್ ರೇವಣ್‍ಕರ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರು ಹಾಜರಿದ್ದರು. ವ್ಯಕ್ತಿತ್ವ ವಿಕಸನ ಕುರಿತಾದ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು. ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ವಂದಿಸಿದರು.
ವರದಿ : ನರೇಂದ್ರ ಎಸ್ ಗಂಗೊಳ್ಳಿ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com