ಕೊಲ್ಲೂರು ದೇಗುಲ ಪಾವಿತ್ರತೆ ರಕ್ಷಣೆಗೆ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರದ ಆವರಣದಲ್ಲಿ ವಿಮಲಾನಂದ ಸ್ವಾಮೀಜಿಯವರ ಸಂಸ್ಕಾರ ಮಾಡಿರುವುದರಿಂದ ದೇವಸ್ಥಾನಕ್ಕೆ ಅಪಚಾರ ಆಗದಂತೆ ಆಗಮ ತಜ್ಞರು, ಧರ್ಮಶಾಸ್ತ್ರಜ್ಞರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನ ಸಭೆ ಶೂನ್ಯ ವೇಳೆಯಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಪ್ರಸ್ತಾಪಿಸಿದ ವಿಷಯಕ್ಕೆ ಲಿಖಿತ ಉತ್ತರ ನೀಡಿರುವ ಸಿದ್ದರಾಮಯ್ಯ, ಶಾಸನ ಮತ್ತು ಸಂಪ್ರದಾಯಗಳಲ್ಲಿ ಗೊಂದಲಗಳಿದ್ದು, ಸ್ಪಷ್ಟತೆ ಇಲ್ಲ. ವಿಭಿನ್ನ ನಿಲುವುಗಳಿಂದಾಗಿ ವಿಮಲಾನಂದ ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ಶ್ರೀ ಕ್ಷೇತ್ರದ ಆವರಣದಲ್ಲಿ ಸಂಸ್ಕಾರ ಮಾಡಿರುವುದು ಸರಿಯೋ-ತಪ್ಪೋ ಎಂಬುದನ್ನು ಹೇಳಲಾಗುತ್ತಿಲ್ಲ. ಹೀಗಾಗಿ ಭಕ್ತರು ಮತ್ತು ಸ್ಥಳೀಯರು ಪ್ರತಿಭಟನೆಯ ಮಾರ್ಗ ಹಿಡಿದಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಂಬಂಧ ತಜ್ಞರ ಜತೆ ಚರ್ಚೆ ನಡೆಸಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನಂಬಿಕೆಗಳಿಗೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು ಎಂದಿದ್ದಾರೆ.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com