ಸ್ವಾಮೀಜಿ ಸಮಾಧಿ ತೆರವಿಗೆ ಸರ್ವಾನುಮತದ ನಿರ್ಣಯ

ಕೊಲ್ಲೂರು : ಕೊಲ್ಲೂರು ನಿತ್ಯಾನಂದ ಮಠದ ಶ್ರೀ ವಿಮಲಾನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ದಫ‌ನ ಕಾರ್ಯವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಸಿರುವುದು ನಿಯಮಬಾಹಿರ; ಅವರ ಸಮಾಧಿಯನ್ನು ಗಡಿಯಿಂದ ಹೊರಗೆ ಸ್ಥಳಾಂತರಿಸಬೇಕು ಎಂದು ಕೊಲ್ಲೂರು ದೇವಳದಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು.

ಸ್ವರ್ಣಮುಖೀ ಸಭಾಭವನದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆಯನ್ನು ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ವಹಿಸಿದ್ದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಲ್‌.ಎಸ್‌. ಮಾರುತಿ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ಆಡಳಿತ ಮಂಡಳಿಯ ಸದಸ್ಯರು, ಅರ್ಚಕರು, ಸಿಬಂದಿಗಳು, ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ ಮಂಡಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com