ಮಕ್ಕಳಿಗೆ ಬಾಲ್ಯವನ್ನು ಅನುಭವಿಸಲು ಬಿಡಿ: ಎ.ಬಿ.ಶೆಟ್ಟಿ

ಕುಂದಾಪುರ: ಬಾಲ ಕಾರ್ಮಿಕರನ್ನು ನೇಮಿಸಿಕೊಂಡಂತ ಮಾಲೀಕರಿಗೆ ಶಿಕ್ಷೆ ಆಗುವುದರೊಂದಿಗೆ, ಕಡ್ಡಾಯ ಶಿಕ್ಷಣ ಹಕ್ಕು ಕಾನುನಿನ ಅನ್ವಯ ಮಕ್ಕಳನ್ನು ದುಡಿಸುವುದರೊಂದಿಗೆ, ಶಿಕ್ಷಣದಿಂದ ವಂಚಿತಗೊಳಿಸುವ ಮಾಲೀಕ ಹಾಗೂ ಪೋಷಕರಿಬ್ಬರನ್ನೂ ಶಿಕ್ಷೆಗೆ ಒಳಪಡಿಸಬೇಕು ಹಾಗೂ ರಜಾ ಅವಧಿಯಲ್ಲಿಯೂ ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸುವುದರೊಂದಿಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು ಎಂದು ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಶೆಟ್ಟಿ, ಹೇಳಿದರು.

ಅವರು ಕುಂದಾಪುರದಲ್ಲಿ ನಡೆದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಸುವರ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ಬಾಲ ಕಾರ್ಮಿಕ ಪದ್ದತಿಯನ್ನು ತಡೆಗಟ್ಟಲು ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಮಾತ್ರವಲ್ಲದೆ ಸುಮಾರು 13 ಕಾಯ್ದೆಗಳು ಈ ನಿಟ್ಟಿನಲ್ಲಿ ಜಾರಿಯಲ್ಲಿದ್ದರೂ, ಇನ್ನೂ ಬಾಲಕಾರ್ಮಿಕರು ಕಂಡು ಬರುತ್ತಿದ್ದು, ಇದನ್ನು ತಡೆಗಟ್ಟಲು ವಿದ್ಯಾರ್ಥಿಗಳ ಪಾತ್ರವು ಮಹತ್ವ ಎಂದು ತಿಳಿಸಿದರು.

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್‌ಕಟ್ಟೆ (ಕೋಟೇಶ್ವರ) ಪ್ರಭಾರ ಪ್ರಾಂಶುಪಾಲ ಗಣೇಶ್‌ ಹೆಚ್‌. ಪ್ರಸ್ತಾವಿಕ ಭಾಷಣ ಮಾಡಿದರು. ಕುಂದಾಪುರದ ಕಾರ್ಮಿಕ ನಿರೀಕ್ಷಕ ಜೀವನ್‌ ಕುಮಾರ್‌, ಹಾಗೂ ನ್ಯಾಯವಾದಿ ಮಂಜುನಾಥ ಅರಾಟೆ, ಇವರು ಸಂಪನ್ಮೂಲ ವ್ಯಕ್ತಿಗಳಾಗಿ, ಬಾಲ ಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.

ಅಜಿತ್‌ ಕುಮಾರ್‌ ಕೋಟ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಕೀಲರ ಸಮಘದ ಪ್ರಧಾನ ಕಾರ್ಯದರ್ಶಿ ಶಿರಿಯಾರ ಮುರಳೀಧರ ಶೆಟ್ಟಿ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com