ಪರಿಶಿಷ್ಟ ಪಂಗಡದವರಿಗೆ ಕಿರು ಸಾಲ ಯೋಜನೆ. ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತೆ ಅಭಿವೃದ್ಧಿ ಯೋಜನೆ, ಭೂ ಒಡೆತನ ಯೋಜನೆ, ವೈಯಕ್ತಿಕ ನೀರಾವರಿ ಕೊಳವೆಬಾವಿ, ತೆರೆದಬಾವಿ ಯೋಜನೆ, ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆ, ಮೈಕ್ರೋ ಕ್ರೆಡಿಟ್ (ಕಿರುಸಾಲ) ಯೋಜನೆಗಳಿಗೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಿಗೆ ಜೂ.20 ರಿಂದ ಅರ್ಜಿ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜು.19ರ ಒಳಗೆ ಸಲ್ಲಿಸಬೇಕು. 

ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸವಲತ್ತು ಪಡೆದ ಫಲಾನುಭವಿಗಳು ಮತ್ತು ಕುಟುಂಬ ದ ಇತರೇ ಸದಸ್ಯರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರಕಾರಿ, ಅರೆ ಸರಕಾರಿ, ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆಯಲ್ಲಿ ಇದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ವಿರುವುದಿಲ್ಲ. 2013,14 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸವಲತ್ತು ಪಡೆಯದೇ ಇರುವ ಅರ್ಜಿದಾರರು ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಅರ್ಜಿದಾರರೇ ಸ್ವತ: ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿಗಳ ಸಂಕೀರ್ಣ,'ಬಿ' ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ ಜಿಲ್ಲಾ ಕಚೇರಿಗೆ ಹಾಜರಾಗಿ ಚುನಾವಣೆ ಗುರುತಿನ ಚೀಟಿ, ಪಡಿತರ ಚೀಟಿ ಹಾಜರುಪಡಿಸಿ ಅರ್ಜಿ ವಹಿಯಲ್ಲಿ ಸಹಿ ಮಾಡಿ ಅರ್ಜಿಗಳನ್ನು ಉಚಿತವಾಗಿ ಪಡೆಯುವುದು ಎಂದು ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com