ಮಯ್ಯಾಡಿ: ಉಚಿತ ನೋಟ್ಸ್ ಪುಸ್ತಕ ವಿತರಣೆ

ಬೈಂದೂರು: ಶ್ರೀ.ಧ.ಮಂ.ಹಿ.ಪ್ರಾ.ಶಾಲೆ ಮಯ್ಯಾಡಿ ಇಲ್ಲಿಯ 290 ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಟ್ರಸ್ಟ್ ಮೂಲಕ ನೀಡಿದ 42,000ರೂಪಾಯಿ ಮೌಲ್ಯದ ನೋಟ್ಸ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು  ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು.
     ಈ ಸಂದರ್ಭದಲ್ಲಿ ದಾನಿಗಳಾದ ಬಿಜೂರು ಗೋವಿಂದ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಗ್ರಾಮಪಂಚಾಯಿತಿ ಸದಸ್ಯರಾದ ಎಸ್.ವೆಂಕಟೇಶ ಪೂಜಾರಿ ಮತ್ತು  ಭಾಗೀರಥಿ ಹಾಗೂ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ವಿಘ್ನೇಶ ಮದ್ದೋಡಿ ಈ ಸಭೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com