ಬೈಂದೂರು ಕೊಡೇರಿಯಲ್ಲಿ ಪ್ರಥಮ ಹಂತದ ಕಾಮಗಾರಿ ಪೂರ್ಣ

ಬೈಂದೂರು: ಕುಂದಾಪುರ ತಾಲೂಕಿನ ಕೊಡೇರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರು ಬಂದರಿನ ಪ್ರಥಮ ಹಂತದ 33 ಕೋಟಿ ರೂ. ಕಾಮಗಾರಿ ಪೂರ್ಣಗೊಂಡಿದ್ದು, ದ್ವೀತಿಯ ಹಂತವಾಗಿ 30 ಕೋಟಿ ಅನುದಾನ ಬಿಡುಗಡೆಯಾಗಿದೆ. ಅದು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಮೀನುಗಾರಿಕಾ ಅಭಯಚಂದ್ರ ಜೈನ್ ಹೇಳಿದ್ದಾರೆ. 

ಅವರು ನಿರ್ಮಾಣ ಹಂತದಲ್ಲಿರುವ ಕೊಡೇರಿ ಬಂದು ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉಳ್ಳಾಲದಿಂದ ಕಾರವಾರದದವರೆಗೆ 300ಕಿ.ಮೀ ಸಮುದ್ರ ಭಾಗದ ಶಾಶ್ವತ ತಡೆಗೋಡೆ ನಿರ್ಮಾಣಕ್ಕಾಗಿ ಎಡಿಬಿ ಯೋಜನೆಯಡಿ 911 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿ ಹಂತದಲ್ಲಿದೆ. ಅಲ್ಲದೇ ತಾತ್ಕಲಿಕ ತಡೆಗೋಡೆ ನಿರ್ಮಾಣಕ್ಕಾಗಿ ಬಂದರು ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com