ಕೋಡಿ: ಕಾಲೇಜು ಒಂದು ಪವಿತ್ರ ಸ್ಥಳವಾಗಿದ್ದು ಅದನ್ನು ವಿದ್ಯಾರ್ಥಿಗಳು ಅಶುಧ್ಧಗೊಳಿಸದೆ ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರೊ. ಚಂದ್ರಶೇಖರ ದೋಮ ಹೇಳಿದರು.
ಅವರು ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ನೂತನ ವಿದ್ಯಾರ್ಥಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರ, ಹೆತ್ತವರ ಹಾಗೂ ಸ್ನೇಹಿತರ ಪ್ರೋತ್ಸಾಹದಿಂದ ವಿದ್ಯಾರ್ಥಿ ಏನನ್ನಾದರೂ ಸಾಧಿಸಲು ಸಾಧ್ಯ. ಭೌತಿಕವಾಗಿ ಬೆಳೆಯಲು ಸತತ ಪರಿಶ್ರಮ ಮುಖ್ಯ. ನೂತನವಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು ಅಗತ್ಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಸಿದ್ದಪ್ಪ ಹಾಜರಿದ್ದರು. ಬ್ಯಾರೀಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಮೀರ್ ಉಪಸ್ಥಿತರಿದ್ದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕ ಮಾತನಾಡಿದರು ವಿದ್ಯಾರ್ಥಿನಿ ರೋಶನಿ ಕಾರ್ಯಕ್ರಮ ನಿರೂಪಿಸಿ, ಸೂಫಿಯಾನ್ ಸ್ವಾಗತಿಸಿ, ಅಫೀಫಾ ವಂದಿಸಿದರು.
0 comments:
Post a Comment