ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ

ಬೈಂದೂರು: ಕಾಲೇಜಿನಿಂದ ಮನೆಗೆ ಹೋಗುವ ವೇಳೆ ಶಿರೂರು ಸಾವಂತ ಗುಡ್ಡದ ಬಳಿ ಅಸಹಜ ಸಾವನ್ನಪ್ಪಿರುವ ವಿದ್ಯಾರ್ಥಿನಿ ರತ್ನಾ ಕೊಠಾರಿ ಅವರ ಕುಟುಂಬಕ್ಕೆ ಸರಕಾರದಿಂದ 3 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಅವರು ಮಂಗಳವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಈ ಪ್ರಕರಣವನ್ನು ಪ್ರಸ್ತಾವಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಗೃಹಸಚಿವರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ; ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುವುದಲ್ಲದೆ ಪ್ರತಿದಿನದ ಪ್ರಗತಿ ವರದಿ ನೀಡುವಂತೆ ವಲಯ ಐಜಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com