ಆರೋಪಿಗಳ ಬಂಧನಕ್ಕೆ ಸಿಪಿಎಂ ಆಗ್ರಹ

ಕುಂದಾಪುರ: ಶಿರೂರು ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ರತ್ನಾ ಕೊಠಾರಿ ಅನುಮಾನಸ್ಪದ ಸಾವು ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಕುಂದಾಪುರ ತಾಲೂಕು ಸಮಿತಿ ಕುಂದಾಪುರ ಶಾಸ್ತ್ರಿ ಸರ್ಕಲ್‌ನಲ್ಲಿ ಪ್ರತಿಭಟನೆಯನ್ನು ನಡೆಸಿತು.
    ಪ್ರತಿಭಟನಾ ಮತ ಪ್ರದರ್ಶನಗಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಕೆ.ಶಂಕರ್‌ ಮಾತನಾಡಿ, ಶಿರೂರಿನ ವಿದ್ಯಾರ್ಥಿನಿ ರತ್ನಾ ಕೊಠಾರಿ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು. ಆರೋಪಿಗಳನ್ನು ಈ ತನಕ ಬಮಧಿಸಲು ಸಾಧ್ಯವಾಗದುದಕ್ಕೆ ಸಿಪಿಎಂ ಜಿಲ್ಲಾ ಹಾಗೂ ತಾಲೂಕು ಸಮಿತಿ ಆತಂಕ ವ್ಯಕ್ತಪಡಿಸಿ ಖಂಡಿಸಿದೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಪೊಲೀಸ್‌ ಇಲಾಖೆ ಸೂಕ್ತ ಭದ್ರತೆಯನ್ನು ಒದಗಿಸುವ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಎಚ್‌.ನರಸಿಂಹ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಮಹಾಬಲ ವಡೇರಹೋಬಳಿ, ವೆಂಕಟೇಶ ಕೋಣಿ, ಸುರೇಶ್‌ ಕಲ್ಲಾಗರ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com