ಶಿರೂರು ವಿದ್ಯಾರ್ಥಿನಿ ಸಾವು: ಸಿಬಿಐ ತನಿಖೆಗೆ ಆಗ್ರಹ

ಕುಂದಾಪುರ: ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರತ್ನಾ ಸಾವಿನ ಪ್ರಕರಣ ಬೇಧಿಸುವಲ್ಲಿ ಇಲಾಖೆ ವಿಫಲವಾಗಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಜರಂಗದಳ ರಾಜ್ಯ ಘಟಕ ಆಗ್ರಹಿಸಿದೆ. 

ಪ್ರಕರಣ ನಡೆದು 10 ದಿನ ಕಳೆದಿದ್ದರೂ ಯಾವುದೇ ಬೆಳವಣಿಗೆ ಕಂಡುಬಂದಿಲ್ಲ. ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಅತ್ಯಾಚಾರ, ನಿಗೂಢ ಸಾವು ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದೆ. ರತ್ನಾ ಕೊಠಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆಕೆಯ ಕುಟುಂಬದವರಿಗೆ ನ್ಯಾಯ ಒದಗಿಸಬೇಕೆಂದು ರಾಜ್ಯ ಘಟಕ ಅಧ್ಯಕ್ಷ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com