ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. 

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ದೂರು ಅರ್ಜಿಗಳು, ಪ್ರಪತ್ರವನ್ನು ಜು. 25,26 ರಂದು ಜಿಲ್ಲೆಯ ವಿವಿಧೆಡೆ ಸ್ವೀಕರಿಸಲಾಗುವುದು. 

ಜು.25,ಬೆಳಗ್ಗೆ 11.30 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಉಡುಪಿ ನಗರಸಭೆ, ಮಧ್ಯಾಹ್ನ 3ರಿಂದ ಸಂಜೆ 4.30 ರ ತನಕ ಕಾರ್ಕಳ ತಾಲೂಕು ಕಚೇರಿಯಲ್ಲಿ ಅರ್ಜಿ ಸ್ವೀಕರಿಸಲಾಗುವುದು. ಜು. 26, ಬೆಳಗ್ಗೆ 11.30 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಕುಂದಾಪುರ ಪುರಸಭೆಯಲ್ಲಿ ಅರ್ಜಿ ಸ್ವೀಕರಿಸಲಾಗುವುದು. 

ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2 ನ್ನು ಪಡೆದು ಅಫಿದಾವಿತ್ ಮಾಡಿಸಿ, ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಗಳನ್ನು ಸಲ್ಲಿಸಬೇಕು. 

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪ್ರಭಾರ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ತಮ್ಮ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಮೋಹನ್ ಕೊಟ್ಟಾರಿ, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ, ಕಷ್ಣಾನಂದ ಜಿ. ನಾಯ್ಕ, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ, ಇವರನ್ನು ( 0820: 2536661) ಸಂಪರ್ಕಿಸಬಹುದು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com