ರತ್ನಾ ಕೊಠಾರಿ ಮನೆಗೆ ಆಸ್ಕರ್ ಭೇಟ

ಬೈಂದೂರು: ನಿಗೂಢವಾಗಿ ಸಾವಿಗೀಡಾದ ವಿದ್ಯಾರ್ಥಿನಿ ರತ್ನ ಕೊಠಾರಿ ಮನೆಗೆ ಸೋಮವಾರ ಬೆಳಗ್ಗೆ ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ವಿದ್ಯಾರ್ಥಿನಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದುದರಿಂದ ಸ್ಪಷ್ಟ ಕಾರಣ ಗುರುತಿಸುವಲ್ಲಿ ವಿಳಂಬವಾಗಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ, ವೈದ್ಯಕೀಯ ವರದಿ ಬಂದಿದೆ. ಆದರೆ ವಿಧಿ ವಿಜ್ಞಾನ ವರದಿ ಇಲಾಖೆಗೆ ದೊರೆತಿಲ್ಲ. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. 

ಸಂಸದೆ ಶೋಭಾ ಕರಂದ್ಲಾಜೆ ವಿದ್ಯಾರ್ಥಿನಿ ಸಾವಿನ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಇದರಲ್ಲಿ ಕಾಣದ ಕೈಗಳು ಕೆಲಸ ಮಾಡುತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಂಸದರು ಪ್ರಬುದ್ಧ ಹೇಳಿಕೆ ನೀಡಬೇಕು, ಕೇವಲ ಆರೋಪ ಮಾಡಿದರೆ ಸಾಲದು, ಯಾವ ವಿಷಯದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂಬುವುದನ್ನು ಸ್ಪಷ್ಟಪಡಿಸಲಿ, ಸಾವಿನ ಮನೆಯಲ್ಲಿ ರಾಜಕೀಯ ಸಲ್ಲದು. ಈ ಬಗ್ಗೆ ಸೂಕ್ತ ಸಲಹೆಗಳೇನಾದರೂ ಇದ್ದರೆ ತಿಳಿಸಲಿ. ಅದನ್ನು ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳುತ್ತೇವೆ ಎಂದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಂ.ಎ. ಗಫೂರ್, ತಾ.ಪಂ. ಸದಸ್ಯರಾದ ರಾಜು ಪೂಜಾರಿ, ರಾಮ ಬೈಂದೂರು, ವಾಸುದೇವ ಯಡಿಯಾಳ್, ರಮೇಶ ಗಾಣಿಗ, ಉದಯ ಮಾಕೋಡಿ, ನಾರಾಯಣ ಅಳ್ವೆಗದ್ದೆ, ನಾಗಪ್ಪ ಕೊಠಾರಿ, ರಘುರಾಮ ಪೂಜಾರಿ ಮತ್ತಿತರರು ಹಾಜರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com