ಯಕ್ಷಗಾನ ವೇಷಭೂಷಣ ತಯಾರಿಕಾ ತರಬೇತಿ

ಬೈಂದೂರು: ಕನ್ನಡ ಮತ್ತು ಸಂಸ್ಕಂತಿ ಇಲಾಖೆ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮತ್ತು ಕಿರಿಮಂಜೇಶ್ವರದ ಧಾರೇಶ್ವರ ಯಕ್ಷ ಬಳಗ ಚಾರಿಟಬಲ್ ಟ್ರಸ್ಟ್‍ಗಳ ಸಂಯುಕ್ತ ಆಶ್ರಯದಲ್ಲಿ ನಾಗೂರಿನ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಬಡಗುತಿಟ್ಟು ಯಕ್ಷಗಾನ ವೇಷಭೂಷಣ ತಯಾರಿಕಾ ತರಬೇತಿ ಕಾರ್ಯಾಗಾರವು ಜುಲೈ 23ರಿಂದ ನಡೆಯುವುದು. ರಾಮ ಹೆಗಡೆ ಮೂರೂರು, ಗಣಪತಿ ಹೆಗಡೆ ಮೂರೂರು, ಕೃಷ್ಣ ಹೆಗಡೆ ಮೂರೂರು, ಅಶೋಕ ಭಟ್, ನಾಗರಾಜ್ ದೇವಲಮಕ್ಕಿ, ಪ್ರಭಾಕರ ಹಾನಗಲ್, ಪುರಂದರ ನಾಯಕ್, ನರಸಿಂಹ ಗಾಂವ್‍ಕರ್, ಉದಯಕುಮಾರ ತೋಟಾಡಿ, ಪ್ರಶಾಂತ ನಾಯಕ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು. 
      ಜುಲೈ 23ರ ಬೆಳಗ್ಗೆ 9 ಗಂಟೆಗೆ ಯಕ್ಷಗಾನ ಸಾಹಿತಿ ಅಂಬಾ ತನಯ ಮುದ್ರಾಡಿ ಅಧ್ಯಕ್ಷತೆಯಲ್ಲಿ ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಉಮೇಶ ಶ್ಯಾನುಭಾಗ್ ಕಾರ್ಯಾಗಾರವನ್ನು ಉದ್ಘಾಟಿಸುವರು. ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಆಶಯ ಭಾಷಣ ಮಾಡುವರು. ಕೆ. ಬಾಲಕೃಷ್ಣ ಶ್ಯಾನುಭೋಗ್ ಮತ್ತು ಪ್ರಕಾಶ ಐತಾಳ್ ಮುಖ್ಯ ಅತಿಥಿಗಳಾಗಿರುವರು. 
   ಆಗಸ್ಟ್ 1ರ ಸಂಜೆ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಂಸ್ಕøತಿ ಇಲಾಖೆಯ ನಿರ್ದೇಶಕ ಕೆ. ಎ. ದಯಾನಂದ ವಹಿಸಲಿದ್ದು, ಎಸ್. ಜನಾರ್ದನ, ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಮಂಜುನಾಥ ಉಡುಪ ಮುಖ್ಯ ಅತಿಥಿಗಳಾಗಿರುವರು. ಕೊನೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯುವುದು ಎಂದು ಟ್ರಸ್ಟ್ ಸಂಸ್ಥಾಪಕ ಸುಬ್ರಹ್ಮಣ್ಯ ಧಾರೇಶ್ವರ ಪ್ರಕಟಿಸಿದ್ದಾರೆ./  
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com