'ಅಜ್ಞಾತನೊಬ್ಬನ ಆತ್ಮ ಚರಿತ್ರೆ' ಕಾದಂಬರಿಗೆ ಪ್ರಶಸ್ತಿ

ಕುಂದಾಪುರ: ಈ ವರ್ಷದ ಡಾ|ಹೆಚ್‌.ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿಯು 2012ರಲ್ಲಿ ಪ್ರಕಟಗೊಂಡ ಕೃಷ್ಣಮೂರ್ತಿ ಹನೂರು ಅವರ 'ಅಜ್ಞಾತನೊಬ್ಬನ ಆತ್ಮ ಚರಿತ್ರೆ' ಎಂಬ ಕಾದಂಬರಿಗೆ ದೊರೆತಿದೆ.
     ಹಿರಿಯ ಲೇಖಕ ಡಾ|ಎಸ್‌.ನಟರಾಜ ಬೂದಾಳು ಡಾ|ಹೇಮಾ ಪಟ್ಟಣಶೆಟ್ಟಿ ಮತ್ತು ಡಾ| ಮಹಾಲಿಂಗ ಭಟ್‌ ಅವರು ನಿರ್ಣಾಯಕರಾಗಿ ಕಾರ್ಯನಿರ್ವಹಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿಗಳ ನಗದು ಮತ್ತು ಪ್ರಶಸ್ತಿ ಪತ್ರಗಳನ್ನೊಳಗೊಂಡಿದೆ. ಆ. 13ರಂದು ಕುಂದಾಪುರದ ಭಂಡಾರ್ಕಾರ್ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com