ಬೈಂದೂರು ನೂತನ ವಿಶೇಷ ತಹಶೀಲ್ದಾರ ಕಚೇರಿ ಉದ್ಘಾಟನೆ

ಬೈಂದೂರು: ಜನರ ನಿರೀಕ್ಷೆ ಸಾಕಷ್ಟಿವೆ. ಅವುಗಳಿಗೆ ಸೂಕ್ತ ಸ್ಪಂದನೆ ಅಗತ್ಯ. ಹಿಂದಿನ ಸರಕಾರದ ಅವಧಿಯಲ್ಲಿ ಬೈಂದೂರು ತಾಲೂಕು ಘೋಷಣೆಯಾಗಿದ್ದು, ಕೆಲವೊಂದು ಆಡಳಿತಾತ್ಮಕ ಕಾರಣಗಳಿಂದ ಅಧಿಕೃತವಾಗಿ ಘೋಷಣೆಯಾಗಿರಲಿಲ್ಲ. ಆದುದರಿಂದ ಪೂರಕ ಅನುದಾನಗಳೊಂದಿಗೆ ಅತೀ ಶೀಘ್ರದಲ್ಲಿ ಬೈಂದೂರು ತಾಲೂಕು ಘೋಷಣೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು.
      ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ರಾಜ್ಯ ಸರಕಾರದ ವಿಶೇಷ ಅನುದಾನದಲ್ಲಿ ಬೈಂದೂರು ಕ್ಷೇತ್ರದಲ್ಲಿ ಹಲವು ಮಹತ್ತರ ಯೋಜನೆಗಳು ಜಾರಿಗೆ ಬಂದಿವೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ತಾಲೂಕು ಕೇಂದ್ರಕ್ಕೆ ಆವಶ್ಯವಿರುವ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ಸರಕಾರದ ಸೇವೆ ಜನಸಾಮಾನ್ಯರಿಗೆ ಸಮರ್ಪಕವಾಗಿ ದೊರೆಯಬೇಕಾಗಿದೆ ಎಂದರು.
       ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ| ಮುದ್ದು ಮೋಹನ್‌, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ಯಡ್ತರೆ ಗ್ರಾ.ಪಂ. ಅಧ್ಯಕ್ಷ ನಾಗರಾಜ್‌ ಶೆಟ್ಟಿ, ಜಿ.ಪಂ. ಸದಸ್ಯ ಸುಪ್ರೀತಾ ಡಿ. ಶೆಟ್ಟಿ, ಬಾಬು ಶೆಟ್ಟಿ, ಗೌರಿ ದೇವಾಡಿಗ, ತಾ.ಪಂ. ಸದಸ್ಯ ರಾಜು ಪೂಜಾರಿ, ಉಪ ನಿರ್ದೇಶಕ ಪ್ರಭುಲಿಂಗ, ರವೀಂದ್ರ, ಎಂಜಿನಿಯರ್‌ ಅರುಣ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
     ಸಹಾಯಕ ಆಯುಕ್ತ ಎಸ್‌. ಯೋಗೀಶ್ವರ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಶೇಷ ತಹಶೀಲ್ದಾರ ಗಾಯತ್ರಿ ಎನ್‌. ನಾಯಕ್‌ ಸ್ವಾಗತಿಸಿದರು. ಸುಧಾಕರ ಪಿ. ಬೈಂದೂರು ಕಾರ್ಯಕ್ರಮ ನಿರೂಪಿಸಿದರು. ಕೊರಗ ಪೂಜಾರಿ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com