ಆ.24:ಉಡುಪಿ ಜಿಲ್ಲಾ ಕೊಂಕಣಿ ವಿದ್ಯಾರ್ಥಿ ಸಮ್ಮೇಳನ

ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಕುಂದಾಪುರದ ಜೈಕೊಂಕಣಿ ಸಂಸ್ಥೆ ಆಗಸ್ಟ್‌ 24 ರಂದು ಆದಿತ್ಯವಾರ ಏರ್ಪಡಿಸಿರುವ ಉಡುಪಿ ಜಿಲ್ಲಾ ಕೊಂಕಣಿ ವಿದ್ಯಾರ್ಥಿ ಸಮ್ಮೇಳನಕ್ಕೆ ಸರ್ವ ಸಿದ್ಧತೆಗಳು ನಡೆಯುತ್ತಿದ್ದು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ನೋಂದಣಿ ಆರಂಭಗೊಂಡಿದೆ.
     ವಿದ್ಯಾರ್ಥಿಗಳೇ ನಡೆಸುವ ಈ ಸಮ್ಮೇಳನದಲ್ಲಿ ಉದ್ಘಾಟನೆಯಿಂದ ಸಮಾರೋಪದ ತನಕ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳೇ ಅತಿಥಿಗಳು, ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ ಹಾಗೂ ವಿದ್ಯಾರ್ಥಿಗಳಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜೈಕೊಂಕಣಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯವರು ಹಿರಿಯ ಕೊಂಕಣಿ ಬಾಂಧವರು ಸ್ಪೂರ್ತಿ ನೀಡಲಿದ್ದಾರೆ.
    ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ರೋಟರಿಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ನಡೆಯಲಿರುವ ಸಮ್ಮೇಳನ ಬೆಳಿಗ್ಗೆ 9.30 ಘಂಟೆಗೆ ಆರಂಭಗೊಳ್ಳಲಿದ್ದು ಸಂಜೆ 5 ಘಂಟೆ ತನಕ ನಡೆಯಲಿದೆ. ಉಡುಪಿ ಜಿಲ್ಲೆ, ಪ್ರೌಢಶಾಲೆ, ಪ.ಪೂ.ಕಾಲೇಜು ಹಾಗೂ ಪದವಿ ಕಾಲೇಜಿನ ಹಾಗೂ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳೂ ಭಾಗವಹಿಸಬಹುದೆಂದು ಸಂಘಟಕರು ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com