ಸರಕಾರಿ ಆದೇಶ ವಿರುದ್ಧ ಉಡುಪಿ ಜಿಲ್ಲೆ ಸರ್ವ ಶಿಕ್ಷಕರ ಒಕ್ಕೂಟ ಅಸಮಾಧಾನ

ಕುಂದಾಪುರ: ಕರ್ನಾಟಕ ರಾಜ್ಯದ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ದೌರ್ಜನ್ಯ/ಅತ್ಯಾಚಾರ ತಡೆಗಟ್ಟಲು ಸರಕಾರ ಹೊರ‌ಡಿಸಿದ ಸುತ್ತೋಲೆಯ ಸಾಧಕ- ಭಾಧಕಗಳ ಕುರಿತು ಚರ್ಚೆ ನಡೆಸಿ ಈ ಸುತ್ತೋಲೆಯಿಂದ ಶಿಕ್ಷಕರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಉಡುಪಿ ಜಿಲ್ಲೆಯ ಸರ್ವ ಶಿಕ್ಷಕರ ಸಂಘಟನೆಯ ಒಕ್ಕೂಟದ ಸಭೆಯನ್ನು ಕರೆದು ಈ ಕೆಳಗಿನ ನಿರ್ಣಯವನ್ನು ಕೈಗೊಳ್ಳಲಾಯಿತು.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘ, ಉಡುಪಿ ಜಿಲ್ಲಾ ಮತ್ತು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಉಡುಪಿ ಜಿಲ್ಲಾ ಮತ್ತು ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ಉಡುಪಿ ಜಿಲ್ಲಾ ಮತ್ತು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘ, ಉಡುಪಿ ಜಿಲ್ಲಾ ಮತ್ತು ತಾಲೂಕು ಪ್ರಾಥಮಿಕ ಶಾಲಾ ದೆ„ಹಿಕ ಶಿಕ್ಷಣ ಶಿಕ್ಷಕರ ಸಂಘ, ಉಡುಪಿ ತಾಲೂಕು ಪ್ರೌಢಶಾಲಾ ದೆ„ಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಉಡುಪಿ ಜಿಲ್ಲಾ ಮತ್ತು ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಈ ಮೇಲಿನ ಎಲ್ಲಾ ನಿರ್ಣಯಗಳನ್ನು ಸರಕಾರ ಗಮನಿಸಿ ಕರ್ನಾಟಕ ರಾಜ್ಯದ ಶಿಕ್ಷಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com