ಕುಂದಾಪುರ: ಕುಂದಾಪುರ ಆರ್.ಎನ್.ಎಸ್. ಕಾಲೇಜಿನ ವಿದ್ಯಾರ್ಥಿನಿ ಸುಪ್ರೀತಾ ಎಸ್. ಪೂಜಾರಿ ಅವರ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಯಾಗಬೇಕು, ಈ ಮೂಲಕ ಅವಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಿಲ್ಲವ ಸಮಾಜ ಸೇವಾ ಸಂಘ(ರಿ.) ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರು ಸೇರಿದಂತೆ ಸೋಮವಾರ ಕುಂದಾಪುರದಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಿದರು.
ಕೈಗೆ ಕಪ್ಪು ಬಟ್ಟೆ ಧರಿಸಿ ಕುಂದಾಪುರ ಶಾಸ್ತ್ರೀ ವೃತ್ತದಿಂದ ಆರಂಭಗೊಂಡ ಮೌನಮೆರವಣಿಗೆ ಕುಂದಾಪುರ ನಗರದಲ್ಲಿ ಸಂಚರಿಸಿ ಕುಂದಾಪುರ ತಹಶಿಲ್ದಾರ್ ಕಚೇರಿ ತನಕ ಸಾಗಿ ಕುಂದಾಪುರ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು.
ಪ್ರತಿಭಟನೆಯ ನೇತ್ರತ್ವ ವಹಿಸಿದ್ದ ಕುಂದಾಪುರ ಬಿಲ್ಲವ ಸಮಾಜಸೇವಾ ಸಂಘ (ರಿ.) ಇದರ ಅಧ್ಯಕ್ಷ ನಾರಾಯಣ ಟಿ. ಪೂಜಾರಿ ಮಾತನಾಡಿ, ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು, ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಈ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ತಹಶಿಲ್ದಾರ್ ಮತ್ತು ಕುಂದಾಪುರ ಡಿವೈಎಸ್ಪಿ ಸಿ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕುಂದಾಪುರ ಬಿಲ್ಲವ ಮಹಿಳಾ ಘಟಕ, ನಾರಾಯಣಗುರು ಯುವಕ ಮಂಡಲ, ಬೈಂದೂರು ವಲಯ ಬಿಲ್ಲವ ಸಂಘ, ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು, ವಿವಿಧ ಪಕ್ಷಗಳಗಳ ಮುಖಂಡರು, ತಾ.ಪಂ.ಸದಸ್ಯರು, ವಿದ್ಯಾರ್ಥಿ ಸಂಘಟನೆಗಳು, ಸಾರ್ವಜನಿಕರು, ವಿದಾರ್ಥಿಗಳು ಈ ಬೃಹತ್ ಮೌನ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸುಪ್ರೀತಾ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
0 comments:
Post a Comment