ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2013ನೇ ಸಾಲಿಗೆ ಯುವ ಬರಹಗಾರರು (18ರಿಂದ 35 ವರ್ಷ) ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಅನುದಾನ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮಶಾì ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
      ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟ್ರೀಯ ನಾಯಕರ ಕುರಿತು ಮನನೋಯಿಸುವಂತಹ ಅಥವಾ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ಪ್ರಸ್ತಾವವಾಗಿರಬಾರದು. ವಯಸ್ಸಿನ ದಾಖಲಾತಿ ಬಗ್ಗೆ ಎಸ್‌ಎಸ್‌ಎಲ್‌ಸಿ ಅಥವಾ ಅಧಿಕೃತ ಜನ್ಮ ದಾಖಲಾತಿ ಪ್ರಮಾಣ ಪತ್ರ, ಇದುವರೆಗೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರ, ಕೃತಿಯನ್ನು ಬೆರಳಚ್ಚು/ ಡಿಟಿಪಿ (ಡಿಟಿಪಿಯಲ್ಲಿ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟ ಇರಬೇಕು.) ಮಾಡಿಸಿ, ಸ್ವ ವಿವರಗಳೊಂದಿಗೆ ಅರ್ಜಿಯನ್ನು ಆ. 20ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಅವರಿಗೆ (ದೂರವಾಣಿ: 080-22484516 / 22017704) ಕಳುಹಿಸಿಕೊಡಲು ಕೋರಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com