ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ 2014-15ನೇ ಸಾಲಿಗೆ ರಾಜ್ಯ ಸರ್ಕಾರದಿಂದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

6ರಿಂದ 15 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿ ನೀಡಲಾಗುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಧಿ 2013 ಆ. 1ರಿಂದ 2014ರ ಜು. 31ರೊಳಗೆ ಇರಬೇಕು ಮತ್ತು ಈ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ, ಭಾವಚಿತ್ರ, ಜನ್ಮ ದಿನಾಂಕ ದಾಖಲೆ ಹಾಗೂ ಶೌರ್ಯ ಪ್ರದರ್ಶಿಸಿದ ಬಗೆಗಿನ ಪತ್ರಿಕಾ ಪ್ರಕಟನೆ ಇನ್ನಿತರ ಪೂರಕ ದಾಖಲೆಗಳನ್ನು ಅರ್ಜಿ ಜೊತೆಗೆ ಲಗತ್ತಿಸಬೇಕು.

ಅರ್ಜಿಯನ್ನು ಸೆ. 5ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್‌ ಕಟ್ಟಡ, ಉರ್ವಸ್ಟೋರ್‌, ಮಂಗಳೂರು ಇವರ ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗೆ ತಿಳಿಸಿದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com