ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್

ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಸೂಪರ್‌ಸ್ಟಾರ್‌ ರಜನಿಕಾಂತ್‌  ಬಂದಿಳಿದಿದ್ದರು.


    ಬಿಳಿ ವಸ್ತ್ರ ತೊಟ್ಟಿದ್ದ ಮೇರು ನಟ ರಜನಿಕಾಂತ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಪುಳಕಿತರಾದ ಅಭಿಮಾನಿಗಳು ಅವರನ್ನು ಸುತ್ತುವರಿದರು. ಅಭಿಮಾನಿಗಳು ಸಂಭ್ರಮದಿಂದ ರಜನಿ ಅವರನ್ನು ಸ್ವಾಗತಿಸಿದರು. ರಜನಿ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ.

ರಜನಿಕಾಂತ್ ಅವರನ್ನು ಕಂಡೊಡನೆ ಅಭಿಮಾನಿಗಳು ಖುಷಿಯಾದರು. ಕೈ ಕುಲುಕಿ, ಪೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ನೋಡನೊಡುತ್ತಿದ್ದಂತೆ ಜನಸಂದಣಿ ಹೆಚ್ಚಾಗತೊಡಗಿತು. ತಕ್ಷಣವೇ ಭದ್ರತಾ ಸಿಬ್ಬಂದಿಗಳು ರಜನಿ ಅವರನ್ನು ಸುತ್ತುವರಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com