ಸುಸಜ್ಜಿತ ಮೀನು ಮಾರುಕಟ್ಟೆ ಉದ್ಘಾಟನೆ

ಬೈಂದೂರು: ಉಪ್ಪುಂದದಲ್ಲಿ 89.85ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಮಹಿಳಾ ಮೀನು ಮಾರುಕಟ್ಟೆಯನ್ನು  ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ರಾಜ್ಯದಲ್ಲಿ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ನಡುವಿನ ನಡುವಿನ ಸಂವಹನದ ಕೊರತೆಯಿಂದ ಅಭಿವೃದ್ಧಿಯಲ್ಲಿ ಹಿನ್ನಡೆಯಾಗುತ್ತಿದೆ. ಈ ಅಂತರ ಕಡಿಮೆ ಮಾಡುವ ಅಗತ್ಯವಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಂಗಳಿಗೆ ಎಡು ಬಾರಿ ಇಲಾಖೆಯ ರಾಜ್ಯಮಟ್ಟದ ಅಧಿಕಾಗಳು ಹಾಗೂ ಮೀನುಗಾರರ ನಭೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು  ಹೇಳಿದ್ದಾರೆ. 
     ಮೀನುಗಾರರಿಗಾಗಿ ಡಿಸೇಲ್, ಸೀಮೆ ಎಣ್ಣೆ ಸಬ್ಸಿಡಿ ಹೆಚ್ಚಳ, ಮಹಿಳಾ ಮೀನುಗಾರರಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಮತ್ಸ್ಯಾಶ್ರಯ ಯೋಜನೆಯಡಿ ಮನೆ ಕಟ್ಟುವವರಿಗೆ 1 ಲಕ್ಷ 20 ಸಾವಿರ ಸಹಾಯ ಧನ, ಮೀನುಗಾರಿಕಾ ರಸ್ತೆ ಅಭಿವೃದ್ಧಿಗೆ 5 ಕೋಟಿ ಅನುದಾನ ಸರ್ಕಾರ ನೀಡಿದೆ. 5 ಕೋಟಿ ನಬಾರ್ಡ್‌ನಿಂದ ಒದಗಿಸುತ್ತಿದೆ. ಬಂದರುಗಳ ನಿರ್ಮಾಣ ಹಾಗೂ ಅಭಿವೃದ್ಧಿಯೂ ಸೇರಿದಂತೆ ಮೀನುಗಾರರ ಸರ್ವಾಂಗೀಣ ಅಭಿವದ್ಧಿಗೆ ಬದ್ಧವಾಗಿದೆ ಎಂದರು. 

ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀ ನಿವಾಸ ಪೂಜಾರಿ, ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ತಾ.ಪಂ. ಸದಸ್ಯರಾದ ಪ್ರಸನ್ನ ಕುಮಾರ, ರಾಜು ಪೂಜಾರಿ, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ವಲಯ ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಬಿ.ಎಚ್. ಕೆ. ಕುಮಾರ ಖಾರ್ವಿ, ಮೀನುಗಾರಿಕಾ ಉಪನಿರ್ದೇಶಕ ಎಮ್.ಡಿ. ಪ್ರಸಾದ್, ಕಂಬದಕೋಣಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಶೆಟ್ಟಿ, ಗಣಪತಿ, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಪುಟ್ಟಿಯಕ್ಕ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com