ಆ.8: ವಿಶೇಷ ತಹಶೀಲ್ದಾರರ ನೂತನ ಕಛೇರಿ ಕಟ್ಟಡ ಉದ್ಘಾಟನೆ

ಬೈಂದೂರು:  ಬೈಂದೂರು ವಿಶೇಷ ತಹಶೀಲ್ದಾರರ ನೂತನ ಕಛೇರಿ ಕಟ್ಟಡವನ್ನು ಶುಕ್ರವಾರ ಆ.8ರಂದು ಶಾಸಕ ಕೆ. ಗೋಪಾಲ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ.

ಈ ಸಮಾರಂಭದಲ್ಲಿ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್, ಶಾಸಕರಾದ ವಿ.ಸುನಿಲ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಚಂದ್ರ ಶೆಟ್ಟಿ, ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ| ಮುದ್ದುಮೋಹನ್, ಸಹಾಯಕ ಆಯುಕ್ತ ಎಸ್. ಯೋಗೇಶ್ವರ್, ತಹಶೀಲ್ದಾರ್ ಶ್ರೀಮತಿ ಗಾಯತ್ರಿ ನಾಯಕ್, ಜಿಪಂ ಪ್ರಭಾರ ಅಧ್ಯಕ್ಷ ಉದಯ ಕೋಟ್ಯಾನ್, ತಾಪಂ ಅಧ್ಯಕ್ಷ ಭಾಸ್ಕರ ಬಿಲ್ಲವ, ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ, ಜಿಪಂ ಸದಸ್ಯೆ ಸುಪ್ರಿತಾ ಡಿ. ಶೆಟ್ಟಿ, ತಾಪಂ ಸದಸ್ಯ ಎಸ್.ರಾಜು ಪೂಜಾರಿ ಉಪಸ್ಥಿತರಿರುವರು ಎಂದು ಕಛೇರಿ ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com