ನವೆಂಬರ್ 14ರಿಂದ 16ರವರೆಗೆ ಆಳ್ವಾಸ್ ನುಡಿಸಿರಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ  ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ `ಆಳ್ವಾಸ್ ನುಡಿಸಿರಿ-2014’ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ರತ್ನಾಕರವರ್ಣಿ ವೇದಿಕೆಯಲ್ಲಿ ನವೆಂಬರ್ 14-16ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಸಾಹಿತ್ಯಾಸಕ್ತ ಸಹೃದಯಿಗಳು  ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕು. ಸಾರ್ವಜನಿಕರು ಸಮ್ಮೇಳದ ಪ್ರತಿನಿಧಿಗಳಾಗಲು ರೂ 100ನ್ನು ಪ್ರತಿನಿಧಿ ಶುಲ್ಕವಾಗಿ ಪಾವತಿಸಬೇಕು. ವಿದ್ಯಾರ್ಥಿಗಳು ಪ್ರತಿನಿಧಿ ಶುಲ್ಕವಿಲ್ಲದೆ ಉಚಿತವಾಗಿ ಪ್ರತಿನಿಧಿಗಳಾಗಬಹುದು. ಎಲ್ಲಾ ಪ್ರತಿನಿಧಿಗಳಿಗೂ ಉಚಿತ ಊಟೋಪಚಾರ ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದೆಂದು ತಿಳಿಸಿದ್ದಾರೆ. ವಿವರಗಳಿಗೆ  ಡಾ. ಎಂ. ಮೋಹನ ಆಳ್ವ, ಕಾರ್ಯಾಧ್ಯಕ್ಷ , ಆಳ್ವಾಸ್ ನುಡಿಸಿರಿ 2014, ಮೂಡುಬಿದಿರೆ 574227, ದೂರವಾಣಿ : 08258-261229ನ್ನು ಸಂಪರ್ಕಿಸಬಹುದಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com