ಗ್ರಾಮ ಅಭಿವೃದ್ಧಿಗೆ ಸಂಘಟಿತ ಕಾರ್ಯನಿರ್ವಹಣೆ ಅಗತ್ಯ

ಕುಂದಾಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ವ್ಯವಸ್ಥೆಯನ್ನು ಸರಿಯಾಗಿ ನಿಭಾಯಿಸಿ ಉತ್ತಮ ಆಡಳಿತ ನೀಡಿದಲ್ಲಿ ಜನರಿಗೆ ವ್ಯವಸ್ಥೆಯ ಮೇಲೆ ವಿಶ್ವಾಸ ಹೆಚ್ಚುತ್ತದೆ. ಆದುದರಿಂದ ವ್ಯವಸ್ಥೆಯ ಸಣ್ಣಪುಟ್ಟ ಲೋಪದೋಷ, ತೊಂದರೆ ಗಣನೆಗೆ ತೆಗದುಕೊಳ್ಳದೆ ಪಂಚಾಯತ್‌ರಾಜ್‌ ಕಾಯ್ದೆ ಮೇಲೆ ನಂಬಿಕೆ ಇರಿಸಿ ಗ್ರಾಮದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯತೆ ಇದೆ ಎಂದು ಮಾಜಿ ಸಚಿವ, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಗಂಗೊಳ್ಳಿ ಗ್ರಾ.ಪಂ.ಗೆ ಭೇಟಿ ನೀಡಿ ಗ್ರಾ.ಪಂ. ಸದಸ್ಯರು ಹಾಗೂ ನೀರು ನೈರ್ಮಲ್ಯ ಸಮಿತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಗ್ರಾ.ಪಂ. ಸಮಸ್ಯೆಗಳ ಬಗ್ಗೆ ಸದಸ್ಯರು ಗಮನ ಸೆಳೆದು ಸರಿಪಡಿಸುವಂತೆ ಆಗ್ರಹಿಸಿದರು. ಸಕಾಲ ಯೋಜನೆ ಅವಧಿಧಿ ಪರಿಷ್ಕರಿಸುವಂತೆ ಸರಕಾರದ ಮೇಲೆ ಒತ್ತಡ ಹೇರಲು, ಗಂಗೊಳ್ಳಿಯನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಲು ಪ್ರಯತ್ನ ನಡೆಸುವಂತೆ ಮತ್ತು ಗಂಗೊಳ್ಳಿ ಗ್ರಾ.ಪಂ.ಗೆ ಖಾಯಂ ಕಾರ್ಯದರ್ಶಿ ನೇಮಕ ಮಾಡುವಂತೆ ಅವರು ಮನವಿ ಮಾಡಿದರು.

ಗಂಗೊಳ್ಳಿ ಗ್ರಾ.ಪಂ.ಅಧ್ಯಕ್ಷೆ ರೇಷ್ಮಾ ಆರ್‌. ಖಾರ್ವಿ, ಉಪಾಧ್ಯಕ್ಷ ಮಹೇಶರಾಜ್‌ ಪೂಜಾರಿ, ಪಿಡಿಒ ಪ್ರವೀಣ ಡಿ'ಸೋಜ, ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com