ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌

ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2014-15ನೇ ಸಾಲಿನಲ್ಲಿ ಪತ್ರಿಕೋದ್ಯಮ/ ವಿದ್ಯುನ್ಮಾನ ಮಾಧ್ಯಮ/ ಸಮೂಹ ಸಂವಹನ ಪದವಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 50 ವಿದ್ಯಾರ್ಥಿಗಳಿಗೆ ಡಿಜಿಟಲ್‌ ಕೆಮೆರಾ ಹಾಗೂ ಪತ್ರಿಕೋದ್ಯಮ/ ವಿದ್ಯುನ್ಮಾನ ಮಾಧ್ಯಮ/ ಸಮೂಹ ಸಂವಹನ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 50 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದ್ದು, ತಮ್ಮ ಹಿಂದಿನ ಆರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ. 50ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ. ಮೀರಿರಬಾರದು. ಈ ಶೈಕ್ಷಣಿಕ ಸಾಲಿನಲ್ಲಿ ಇದೇ ಸ್ವರೂಪದ ಸೌಲಭ್ಯವನ್ನು ಸರಕಾರದ ಯಾವುದೇ ಇಲಾಖೆಯಿಂದ ಪಡೆದಿರಬಾರದು.

ಈ ಯೋಜನೆಯಡಿ ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸುವಂತ್ತಿಲ್ಲ. ಈಗಾಗಲೇ ವಿದ್ಯಾರ್ಥಿಗಳ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಲು ಎಲ್ಲಾ ಸರಕಾ ಪದವಿ ಕಾಲೇಜುಗಳಿಗೆ ಹಾಗೂ ಪತ್ರಿಕೋದ್ಯಮ ಬೋಧಿಸುವ ವಿಶ್ವವಿದ್ಯಾಲಯ ವಿಭಾಗಗಳಿಗೆ ಕೋರಲಾಗಿದೆ. ಪಟ್ಟಿ ಒದಗಿಸಲು ಸೆ. 20 ಕೊನೆಯ ದಿನವಾಗಿರುತ್ತದೆ. ಕೇವಲ ಮೆರಿಟ್‌ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಿದ್ಯಾರ್ಥಿಗಳು ತಮ್ಮ ಹೆಸರು, ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ, ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರದ ಪ್ರತಿ, ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯ ಶೇಕಡವಾರು ಅಂಕಗಳ ವಿವರಗಳನ್ನು ಹಾಗೂ ಅಂಕಪಟ್ಟಿಯ ಪ್ರತಿಯನ್ನು ತಮ್ಮ ಕಾಲೇಜು/ ವಿಭಾಗದ ಮುಖ್ಯಸ್ಥರಿಗೆ ಸಕಾಲದಲ್ಲಿ ಒದಗಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com