ಕೊಲ್ಲೂರಿನ ಆಗಮಿಸಿದ ಪಂಚಾಯಿತ್ ರಾಜ್ ಸಂಸ್ಥೆಗಳ ಸಮಿತಿ

ಕೊಲ್ಲೂರು: ರಾಜ್ಯ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಹಾಗೂ ಪಂಚಾಯಿತ್ ರಾಜ್ ಸಂಸ್ಥೆಗಳ ಸಮಿತಿಯು ಗುರುವಾರ ಕೊಲ್ಲೂರಿಗೆ ಆಗಮಿಸಿದ್ದು, ಕೊಲ್ಲೂರಿನಲ್ಲಿ ತಾಲೂಕು ಪಂಚಾಯತ್ ಸದಸ್ಯ ಕೊಲ್ಲೂರು ರಮೇಶ ಗಾಣಿಗ ನೇತೃತ್ವದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಕೊಲ್ಲೂರಿನ ಸರ್ಕಾರಿ ವಿಶ್ರಾಂತಿ ಧಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ  ಸಮಿತಿಯ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಮೇಶ ಗಾಣಿಗರ ನೇತೃತ್ವದಲ್ಲಿ ಸಮಿತಿಯ ಎಲ್ಲ ಸದಸ್ಯರನ್ನು ಸನ್ಮಾನಿಸಲಾಯಿತು. ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣ ಪ್ರಸಾದ್ ಅಡ್ಯಂತಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್.ಮಾರುತಿ, ಜಿ.ಪಂ.ಯೋಜನಾಧಿಕಾರಿ ವಿಜಯ್ ಕುಮಾರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಐತಾಳ್ ಮುಂತಾದವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com