ಚಲನಚಿತ್ರ ಪ್ರದರ್ಶನ ಉದ್ಘಾಟನೆ

ಕೋಟ: ವಿಶ್ವ ಮಾನ್ಯರಾದ ಶಿವರಾಮ ಕಾರಂತರದ್ದು ಅದ್ಬುತ ವ್ಯಕ್ತಿತ್ವ. ಕಾರಂತರಿಂದ ಕೋಟ ಪರಿಸರ ವಿಶ್ವದಾದ್ಯಂತ ಪರಿಚಯವಾಗಿದೆ ಎಂದು ಉಡುಪಿ ಜಿಲ್ಲಾ ಗಾಣಿಗ ಯುವ ಸಂಘಟನೆ ಅಧ್ಯಕ್ಷ ದಿನೇಶ ಗಾಣಿಗ ಹೇಳಿದರು. 

ಶನಿವಾರ ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ಗಾಣಿಗ ಯುವ ಸಂಘಟನೆ ಆಶ್ರಯದಲ್ಲಿ ನಡೆದ ಚಲನಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಕೋಟದ ಕಾರಂತ ಭವನದಲ್ಲಿ ನಿರಂತರ ಕಾರ್ಯಕ್ರಮಗಳ ಮೂಲಕ ಶಿವರಾಮ ಕಾರಂತರನ್ನು ನೆನಪಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು. 

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಂಘಟನೆ ಜತೆ ಕಾರ‌್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಗಾಣಿಗ ಯುವ ಸಂಘಟನೆ ಕೋಟ ಘಟಕದ ಗೌರವ ಸಲಹೆಗಾರ ಗೋಪಾಲ ಗಾಣಿಗ ಅಚ್ಲಾಡಿ, ಮಾಬುಕಳ ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಣೇಶ ಜಿ. ಚಲ್ಲೆಮಕ್ಕಿ, ಗಾಣಿಗ ಯುವ ಸಂಘಟನೆ ಕೋಟ ಘಟಕದ ಗೌರವಾಧ್ಯಕ್ಷ ಶ್ರೀಧರ ಗಾಣಿಗ ಕೋಟ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com