ಮರವಂತೆ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ

ಮರವಂತೆ: ಕಳೆದ ಸಾಲಿನ ಸಮಗ್ರ ನಿರ್ವಹಣೆಯನ್ನು ಪರಿಗಣಿಸಿ ಕುಂದಾಪುರ ತಾಲೂಕಿನ ಮರವಂತೆ ಗ್ರಾಮ ಪಂಚಾಯತನ್ನು ರಾಜ್ಯ ಸರಕಾರವು ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಅ. 2ರ ಗಾಂಧಿ ಜಯಂತಿಯಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್. ಕೆ. ಪಾಟೀಲ್ ಆ ಸಂಬಂಧದ ಪ್ರಶಸ್ತಿ ಮತ್ತು ರೂ. 5 ಲಕ್ಷದ ಬಹುಮಾನವನ್ನು ಅಧ್ಯಕ್ಷೆ ಕೆ. ಎ. ಸುಗುಣಾ ಅವರಿಗೆ ನೀಡಿದರು. ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಸದಸ್ಯರು, ಅಬಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಹರಿಶ್ಚಂದ್ರ ಆಚಾರ್, ಸಿಬ್ಬಂದಿ ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com