ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ವಂಡ್ಸೆ: ಅದೃಷ್ಟ, ವಿಧಿಯ ಹೊರತಾಗಿಯೂ, ನಮ್ಮ ಭವಿಷ್ಯದ ನಿರ್ಮಾಣ ನಮ್ಮಿಂದಲೇ ಸಾಧ್ಯ. ಬಾಲ್ಯದಲ್ಲಿ ನಾಳಿನ ಬದುಕನ್ನು ಇಂದೇ ನಿರ್ಧರಿಸಿ ಮುಂದುವರಿಯಬೇಕು. ಜಾತಿ, ಮತ, ಭೇದವಿಲ್ಲದೆ ಕೂಡು ಕುಟುಂಬವಾಗಿ ಕೆಲವು ದಿವಸಗಳನ್ನು ಸೇವೆಯ ರೂಪದಲ್ಲಿ ಬದುಕನ್ನು ಕಟ್ಟಿಕೊಡುವ ಈ ಯೋಜನೆ ತುಂಬ ಉಪಯುಕ್ತವಾದುದು. ವಿದ್ಯಾರ್ಥಿಗಳು ಅವಕಾಶವನ್ನು ಸಾರ್ಥಕಪಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ, ವಂಡ್ಸೆಯ ಶ್ರೀಮತಿ ಇಂದಿರಾ ಶೆಟ್ಟಿ ಅಭಿಪ್ರಾಯಪಟ್ಟರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ, ವಂಡ್ಸೆ ನೆಂಪು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ಕಾಲೇಜಿನ ಪ್ರಾಂಶುಪಾಲ ಆರ್. ಎನ್. ರೇವಣಕರ್ ಅಧ್ಯಕ್ಷತೆವಹಿಸಿದ್ದರು.
ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ,  ವಂಡ್ಸೆ ಕಾಲೇಜಿನ ಪ್ರಾಂಶುಪಾಲ ಕೆ.ಟಿ. ಶಿವರಾಂ, ಗಂಗೊಳ್ಳಿ ಸ. ವಿ. ಪ.ಪೂ.ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ತಾಲೂಕು ಪಂಚಾಯತ್ ಸದಸ್ಯೆ ಶಶಿಕಲಾ ಪೂಜಾರಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಭಾಸ್ಕರ ಶೆಟ್ಟಿ ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಗುಣ ಸ್ವಾಗತಿಸಿದರು. ಕವಿತಾ ಎಂ. ಸಿ ಗೌರವಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ನಿರ್ವಹಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com