ಅ.26: ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘ ಅಸ್ತಿತ್ವಕ್ಕೆ

ಉಡುಪಿ: ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಸಮಾರಂಭ ಅ.26ರಂದು ಬೆಳಗ್ಗೆ 11.30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನಿವೃತ್ತ ಎಸ್‌ಪಿ ವಿಶ್ವನಾಥ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಪಶ್ಚಿಮ ವಲಯದ ಐಜಿಪಿ ಅಮೃತ್‌ಪಾಲ್ ಸಂಘ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ, ಎಸ್ಪಿ ಪಿ.ರಾಜೇಂದ್ರ ಪ್ರಸಾದ್, ಪೌರಾಯುಕ್ತ ಶ್ರೀಕಾಂತ್ ರಾವ್, ದ.ಕ.ಜಿಲ್ಲಾ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜೆ.ಭಂಡಾರಿ ಉಪಸ್ಥಿತರಿರುವರು ಎಂದರು. 

ಉದ್ಘಾಟನೆ ಸಮಾರಂಭದ ಪೂರ್ವದಲ್ಲಿ ಸದಸ್ಯತ್ವದ ನೋಂದಣಿ ನಡೆಯಲಿದೆ. ನಿವೃತ್ತ ಪೊಲೀಸ್ ಅಧಿಕಾರಿಗಳನ್ನು (ಕೆಪಿಎಸ್ ಅಲ್ಲದ) ಒಂದೇ ಸೂರಿನಡಿ ಸೇರಿಸಿ ಅವರಿಗೆ ಚೈತನ್ಯ ಮೂಡಿಸುವುದು, ಸದಸ್ಯರ ಮಕ್ಕಳ ವಿದ್ಯಾಭ್ಯಾಸ, ವೃತ್ತಿ ಜೀವನದ ಬಗ್ಗೆ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡುವುದು. ಬ್ಯಾಂಕ್ ನೆರವು, ಆರೋಗ್ಯ ಭಾಗ್ಯ ಸವಲತ್ತು ಸೇರಿದಂತೆ ಆವಶ್ಯಕ ಕಾನೂನು ಸಲಹೆಗಳನ್ನು ನೀಡುವ ಉದ್ದೇಶದಿಂದ ಈ ಸಂಘವನ್ನು ರಚಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com