ಗಂಗೊಳ್ಳಿ ಬಂದರಿಗೆ ಸಹಾಯಕ ಕಮಿಷನರ್ ಭೇಟಿ

ಗಂಗೊಳ್ಳಿ ಕುಂದಾಪುರದ ಸಹಾಯಕ ಕಮಿಷನರ್ ಚಾರುಲತಾ ಸೋಮಲ್ ಮಂಗಳವಾರ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಗಂಗೊಳ್ಳಿ ಅಳಿವೆಯಲ್ಲಿ ಸಂಭವಿಸುತ್ತಿರುವ ದೋಣಿ, ಬೋಟು ದುರಂತಗಳ ಬಗ್ಗೆ ಸ್ಥಳೀಯ ಮೀನುಗಾರರಿಂದ ಮಾಹಿತಿ ಪಡೆದುಕೊಂಡ ಅವರು, ಮೀನುಗಾರರ ವಿವಿಧ ಸಮಸ್ಯೆಗಳನ್ನು ಆಲಿಸಿದರು. 

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪ್ರದೇಶ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದ ಅವರು, ಅಳಿವೆಯಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು. 

ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ತುರ್ತು ಸೇವೆಗಳ ಮತ್ತು ಕರಾವಳಿ ಕಾವಲು ಪೊಲೀಸ್ ಠಾಣೆಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಸಿಬ್ಬಂದಿ ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು. 

ಕಂದಾಯ ಅಧಿಕಾರಿ ಅಶೋಕಕುಮಾರ್, ಗಂಗೊಳ್ಳಿ ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ, ಹೆಮ್ಮಾಡಿ ಗ್ರಾಮಕರಣಿಕ ರವಿಶಂಕರ, ಮೀನುಗಾರಿಕೆ ಇಲಾಖೆಯ ಗೋಪಾಲಕಷ್ಣ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com