ಉಚಿತ ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ ಉಡುಪಿ ವಿಭಾಗ ಇವರ ಸಹಭಾಗಿತ್ವದಲ್ಲಿ ಮಣಿಪಾಲ ಕೆ‌ಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ನೇತೃತ್ವದಲ್ಲಿ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಬುಧವಾರ ಉಚಿತ ನೇತ್ರ ತಪಾಸಣಾ ಶಿಬಿರ ಜರಗಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್, ಶಿಬಿರದಲ್ಲಿ ಕಣ್ಣಿನ ಪೊರೆ ಮೊದಲಾದ ಕಣ್ಣಿನ ಸಮಸ್ಯೆಗಳ ಬಗ್ಗೆ ತಪಾಸಣೆ ನಡೆಸಿ, ಕಣ್ಣಿನಪೊರೆ ಚಿಕಿತ್ಸೆಗೆ ಅರ್ಹರಾದವರನ್ನು ಮಣಿಪಾಲದ ಕೆ‌ಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತವಾಗಿ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಿ ಮನೆಗೆ ತಂದು ಬಿಡಲಾಗುತ್ತದೆ. ಈ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ತಾಪಂ ಸದಸ್ಯೆ ಪೂರ್ಣಿಮಾ ಎಂ.ಖಾರ್ವಿ, ಮಣಿಪಾಲ ಕೆ‌ಎಂಸಿ ಆಸ್ಪತ್ರೆಯ ಕಣ್ಣಿನ ತಜ್ಞರಾದ ಡಾ.ಸ್ಮಿತಾ, ಡಾ.ಹರೀಶ್ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಸ್ವಾಗತಿಸಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ನಿರ್ದೇಶಕ ಬಿ.ಪ್ರಕಾಶ ಶೆಣೈ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com