ಕು. ತಾ. ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಲ್ಲೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಿಂದ ಪುಳಕಿತಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸರಸ್ವತಿ ಸೇವೆಗೆ ಹೊಸ ಹುರುಪು ಮೈಗೂಡಿಸಿಕೊಂಡಿದೆ. ಪರಿಷತ್ತಿನ ಶತಮಾನೋತ್ಸವಾಚರಣೆಯ ಈ ಸಂದರ್ಭದಲ್ಲಿ ಕೊಲ್ಲೂರಿನಲ್ಲಿ ಹಮ್ಮಿಕೊಂಡಿರುವ ಕುಂದಾಪುರ ತಾಲೂಕು 14ನೇಯ ಸಾಹಿತ್ಯ ಸಮ್ಮೇಳನ ಸರ್ವಾಂಗ ಸಂಪನ್ನಗೊಳಿಸಲು ಎಲ್ಲಾ ಸಾಹಿತ್ಯಾಭಿಮಾನಿಗಳೂ ಕೈ ಜೋಡಿಸಬೇಕು ಎಂದು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಕೊಲ್ಲೂರು ಮುಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಷ್ಣಪ್ರಸಾದ ಅಡ್ಯಂತಾಯ ಹೇಳಿದರು. 

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ, ನ.29 ಮತ್ತು 30ರಂದು ನಡೆಯುವ ಕುಂದಾಪುರ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. 

ದೇವಳದ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್.ಮಾರುತಿ ಪ್ರಥಮ ಆಹ್ವಾನ ಪತ್ರಿಕೆ ಸ್ವೀಕರಿಸಿ ಶುಭ ಹಾರೈಸಿದರು. ತಾಲೂಕು ಕಸಾಪ ಅಧ್ಯಕ್ಷ ನಾರಾಯಣ ಖಾರ್ವಿ, ಕಾರ್ಯದರ್ಶಿ ಕೆ.ಗಣಪತಿ ವೈದ್ಯ, ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಭಾಸ್ಕರ ಕಲೈಕಾರ್, ದೇವಳದ ಅಧೀಕ್ಷಕ ರಾಮಕಷ್ಣ ಅಡಿಗ, ನಾರಾಯಣ ನಾಯಕ್ ನೇರಳಕಟ್ಟೆ, ಎ.ಗಂಗಾಧರ ಹೆಗ್ಡೆ ಉಪಸ್ಥಿತರಿದ್ದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com