ಡಾ.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ

ಕುಂದಾಪುರ: ಪ್ರತಿಯೊಬ್ಬರ ಜೀವನದಲ್ಲಿಯೂ ಸಂತೋಷದ ಘಳಿಗೆ ಒಂದಿರುತ್ತದೆ. ಕರ್ನಾಟಕ ರಾಜ್ಯೋತ್ಸವದಂದು ಪುರಸ್ಕಾರ ಲಭಿಸಿರುವುದು ರಾಜ್ಯೋತ್ಸವ ಪ್ರಶಸ್ತಿ ದೊರೆಕಿದಷ್ಟೇ ಸಂತೋಷವಾಗಿದೆ ಎಂದು ಬಡಗುತಿಟ್ಟಿನ ಸುಪ್ರಸಿದ್ಧ ಯಕ್ಷಗಾನ ಕಲಾವಿದ ಮಂಕಿ ಈಶ್ವರ ನಾಯ್ಕ್ ಹೇಳಿದರು. 

ಶನಿವಾರ ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಜರುಗಿದ 2014ನೇ ಸಾಲಿನ ಡಾ.ಎಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಸಮಾರಂಭದಲ್ಲಿ ಅವರು ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. 

ಬದುಕಲಿಕ್ಕೆ ಉದ್ಯೋಗ ಅಗತ್ಯವಾಗಿ ಬೇಕು. ಆದರೆ ಅದರಿಂದ ಇನ್ನೊಬ್ಬರಿಗೆ ಸಂತೋಷ ಮತ್ತು ಖುಷಿಯನ್ನು ಮತ್ತು ಆತ್ಮತಪ್ತಿ ನೀಡಬೇಕು. ಅಂತಹ ಒಂದು ಶಕ್ತಿ ಕಲಾ ಕ್ಷೇತ್ರದಲ್ಲಿ ದುಡಿವವರಿಗಿದೆ. ಅದರಲ್ಲೂ ಯಕ್ಷಗಾನ ಸುಧೀರ್ಘ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕಲೆ. ಸಾಂಪ್ರದಾಯಿಕತೆಗೆ ಪೂರಕವಾಗಿ ಯಕ್ಷಗಾನವನ್ನು ಸಜನಶೀಲವಾಗಿ ಬೆಳೆಸಬೇಕು ಎಂದರು. ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಪ್ರಶಸ್ತಿ ಪ್ರದಾನ ಮಾಡಿದರು. 

ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅಭಿನಂದನ ಭಾಷಣ ಮಾಡಿದರು. ಭಂಡಾರ್ಕಾರ್ಸ್‌ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಡಾ.ಎನ್.ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ. ಗಣಪತಿ ಭಟ್ ಸನ್ಮಾನ ಪತ್ರ ಓದಿದರು. 

ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಜಿ.ಎಂ.ಗೊಂಡ ವಂದಿಸಿದರು. ಕಾಲೇಜಿನ ಯಕ್ಷಗಾನ ಸಂಘದ ಸಂಚಾಲಕ ಡಾ.ರಮೇಶ್ ಚಿಂಬಾಳ್ಕರ್ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಪ್ರಯುಕ್ತ ಗದಾಯುದ್ಧ ಯಕ್ಷಗಾನ ತಾಳಮದ್ದಳೆ ಕಾರ‌್ಯಕ್ರಮ ನಡೆಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com