ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಆಹ್ವಾನ

ಮಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ 2013-14ನೇ ಸಾಲಿಗೆ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿ ಮಹಿಳೆಯರ ಅಭಿವೃದ್ಧಿಗೆ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆ ಗುಣಮಟ್ಟವನ್ನು ಆಧಾರವಾಗಿ ಇರಿಸಿಕೊಳ್ಳಲಾಗುತ್ತದೆ.

ವೀರಮಹಿಳೆ ಪ್ರಶಸ್ತಿಗೆ 18ರಿಂದ 45 ವಯೋಮಿತಿ ಒಳಗಿನವರು ಅರ್ಜಿ ಸಲ್ಲಿಸಬಹುದು. ಓರ್ವ ಮಹಿಳೆ ಆಪತ್ಕಾಲದಲ್ಲಿರುವ ಮತ್ತೂಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸ ಮಾಡಿರಬೇಕು. ಈ ಸಾಧನೆ ಸಾರ್ವಜನಿಕರ ಗಮನಕ್ಕೆ ಬಂದಿರಬೇಕು ಮತ್ತು ಜನವರಿ-2013ರಿಂದ ಡಿಸೆಂಬರ್‌ 31, 2013ರೊಳಗೆ ನಡೆದಿರಬೇಕು.

ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್‌ ಕಟ್ಟಡ, ಉರ್ವಾಸ್ಟೋರ್‌, ಮಂಗಳೂರು-ಇಲ್ಲಿಂದ ನಿಗದಿತ ನಮೂನೆ ಪಡೆದು ಪ್ರಸ್ತಾವನೆಯನ್ನು ನ. 30ರೊಳಗಾಗಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com