ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ



ಕುಂದಾಪುರ: ಶೈಕ್ಷಣಿಕ  ಆಡಳಿತದಲ್ಲಿ ಹೊಸತನದ ಅನ್ವೇಷಣೆ ಮತ್ತು ಅಳವಡಿಕೆಗಾಗಿ  ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾಲಯ  ಕೊಡಮಾಡುವ  ರಾಷ್ಟ್ರ ಪ್ರಶಸ್ತಿಯನ್ನು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿಯವರಿಗೆ ನವೆಂಬರ್ 29ರಂದು ಭಾರತ ಸರ್ಕಾರದ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾಣಿ  ನೀಡಿ ಗೌರವಿಸಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ವಿಶ್ವವಿದ್ಯಾಲಯದ ಕುಲಪತಿ ಶ್ರೀ ಗೋಪಾಲ ಮತ್ತು ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಭಟ್ಟಾಚಾರ್ಯ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com