ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

ಬಸ್ರೂರು: ಮೂಡುಬಿದಿರೆ ಆಳ್ವಾಸ್ ಪುರುಷರ ಹಾಗೂ ಮಹಿಳಾ ತಂಡಗಳು ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಡಿ.12 ಹಾಗೂ 13ರಂದು ನಡೆದ ಮಂಗಳೂರು ವಿವಿ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾವಳಿಯ ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. 

ಪುರುಷರ ವಿಭಾಗದಲ್ಲಿ ಮಂಗಳೂರಿನ ಎಸ್‌ಜಿಸಿ ಕಾಲೇಜು ದ್ವಿತೀಯ, ಮಂಗಳೂರಿನ ರೊಜಾರಿಯೋ ಕಾಲೇಜು ತೃತೀಯ ಸಮಗ್ರ ಪ್ರಶಸ್ತಿಯನ್ನು ಪಡೆದವು. ಮಹಿಳಾ ವಿಭಾಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ತರಬೇತಿ ಸಂಸ್ಥೆ ದ್ವಿತೀಯ ಮತ್ತು ಮಂಗಳೂರಿನ ಎಸ್‌ಜಿಸಿ ಕಾಲೇಜು ತೃತೀಯ ಸಮಗ್ರ ಪ್ರಶಸ್ತಿ ಪಡೆದವು. ಪಂದ್ಯಾವಳಿಯಲ್ಲಿ ಮಂಗಳೂರು ವಿವಿ ವ್ಯಾಪ್ತಿಯ ನಾನಾ ಕಾಲೇಜುಗಳನ್ನು ಪ್ರತಿನಿಧಿಸಿದ ನೂರಕ್ಕೂ ಹೆಚ್ಚು ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಪಾಲ್ಗೊಂಡಿದ್ದರು. 

ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಎಂ. ಚಂದ್ರಪ್ರಭಾ ಆರ್. ಹೆಗ್ಡೆ ಸಮಾರೋಪ ಮತ್ತು ಬಹುಮಾನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ., ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕಲ್ಪನಾ ಭಾಸ್ಕರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಆಚಾರ್, ಬಸ್ರೂರು ಗ್ರಾಪಂ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ, ಕಾಲೇಜಿನ ಪ್ರಿನ್ಸಿಪಾಲ್ ಕೆ. ರಾಧಾಕೃಷ್ಣ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

ಈ ಸಂದರ್ಭ ಕುಸ್ತಿ ತರಬೇತುದಾರ ನವೀದ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಕ್ರೀಡಾ ವೇದಿಕೆ ಸಂಚಾಲಕ ಪುರುಷೋತ್ತಮ ಬಲ್ಯಾಯ ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕಿ ಡಾ. ಚಂದ್ರಾವತಿ ಶೆಟ್ಟಿ ವಂದಿಸಿದರು. ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಮತ್ತು ರಾಘವೇಂದ್ರ ಶೆಟ್ಟಿ ಕಾ0ರ್ುಕ್ರಮ ನಿರ್ವಹಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com