ಬೈಂದೂರು ನೂತನ ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ ಕಟ್ಟಡ ಗುದ್ದಲಿ ಪೂಜೆ

ಬ್ಯೆಂದೂರು: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪೋಷಕರಿಗೆ ಆಂಗ್ಲ ಮಾಧ್ಯಮದ ವ್ಯಾಮೋಹದ ಹೆಚ್ಚುತ್ತಿದ್ದು ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಉಳಿಸಿಕೊಳ್ಳುವುದು ಹೊಸ ಸವಾಲಾಗಿ ಪರಿಣಮಿಸಿದೆ. ಸರಕಾರಿ ಶಾಲೆಗಳ ಶಿಕ್ಷಕರ ಹೊಸ ಚಿಂತನೆಯಿಂದ ಕನ್ನಡ ಮಾಧ್ಯಮ ಶಾಲೆಗಳ ಉಳಿವು ಸಾಧ್ಯ ಎಂದು ಬ್ಯೆಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.


ಅವರು ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ ಇದರ ವತಿಯಿಂದ 49 ಲಕ್ಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ ಕಟ್ಟಡ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಕೇವಲ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಶಿಕ್ಷಕರು ಗಮನಹರಿಸಿದರೆ ಹೊಸತನ ಕಂಡುಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಪಾಲಕರಿಗೆ ಭರವಸೆ ಮೂಡಿಸುವಲ್ಲಿ ಹೊಸ ಹೊಸ ಚಿಂತನೆ ನಡೆಸಿ ತನ್ಮೂಲಕ ಹೊಸ ಬದಲಾವಣೆಗೆ ನಾಂದಿಯಾಗಬೇಕು.
               ಈ ಸಂಧರ್ಭದಲ್ಲಿ ಉಡುಪಿ ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿ.ಪಂ ಸದಸ್ಯ ಬಾಬು ಶೆಟ್ಟಿ, ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ,  ವಂಡ್ಸೆ ಜಿ.ಪಂ ಸದಸ್ಯ ಇಂದಿರಾ ಶೆಟ್ಟಿ,  ತಾ.ಪಂ.ಸದಸ್ಯರಾದ ರಾಜು ಪೂಜಾರಿ, ರಮೇಶ ಗಾಣಿಗ, ಸಾವಿತ್ರಿ ಅಳ್ವೆಗದ್ದೆ, ಯಡ್ತರೆ ಗ್ರಾ.ಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಗಣಪತಿ ಹೋಬಳಿದಾರ್, ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ಸುರೇಶ ಎ.ವಿ. ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com