ಡಿ.23-24: ಕುಂದಾಪುರ ಕೃಷಿ ಉತ್ಸವ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ, ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕುಂದಾಪುರ ಇವರ ಸಹಯೋಗದಲ್ಲಿ ಡಿ. 23 ಮತ್ತು 24ರಂದು ಗುರುಕುಲ ವಿದ್ಯಾಸಂಸ್ಥೆ ಮೈದಾನದಲ್ಲಿ ಕೃಷಿ ಉತ್ಸವ ನಡೆಯಲಿದೆ.

ಇದೇ ಸಂದರ್ಭದಲ್ಲಿ 5001ನೇ ಪ್ರಗತಿಬಂಧು ಸ್ವಸಹಾಯ ಸಂಘದ ಉದ್ಘಾಟನೆ ಮತ್ತು ಬಸ್ರೂರು ಅಪ್ಪಣ್ಣ ಹೆಗ್ಡೆಯವರ 80ರ ಶುಭಾಶಂಸನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೃಷಿ ಉತ್ಸವದ ಉದ್ಘಾಟನಾ ಸಮಾರಂಭ ಡಿ. 23ರಂದು ಬೆಳಗ್ಗೆ 9.30ಕ್ಕೆ ಆಕರ್ಷಕ ಮೆರವಣಿಗೆಯೊಂದಿಗೆ ಆರಂಭಗೊಳ್ಳಲಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಹಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ್ ಉದ್ಘಾಟಿಸುವರು. ಸಂಸದೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ. ಕ್ಯಾಂಪ್ಕೊ ಅಧ್ಯಕ್ಷ ಕೊಂಕೋಡಿ ಪದ್ಮನಾಭ ವಸ್ತುಪ್ರದರ್ಶನ ಮಳಿಗೆ ಉದ್ಘಾಟಿಸುವರು. ಶಾಸಕ ಕೆ. ಗೋಪಾಲ ಪೂಜಾರಿ ಜಾನುವಾರು ತಳಿ ಪ್ರದರ್ಶನ ಉದ್ಘಾಟಿಸುವರು. ಹಿರಿಯ ಸಮಾಜ ಸೇವಕರಾಗಿ, ರಾಜಕೀಯ ಧುರೀಣರಾಗಿ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ತಮ್ಮ ಸೇವಾ ಮನೋಭಾವ ಮತ್ತು ಕ್ರಿಯಾಶೀಲತೆ ಮೂಲಕ ಜನಪ್ರಿಯರಾಗಿರುವ ಬಸ್ರೂರು ಅಪ್ಪಣ್ಣ ಹೆಗ್ಡೆ ಡಿ. 24ರಂದು 80ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದು, ಶುಭಾಶಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂದರ್ಭ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಅನಾರೋಗ್ಯ ಪೀಡಿತರಿಗೆ ನೀಡಲಾಗುವ ಸಹಾಯಧನವನ್ನು ಬೆಂಗಳೂರು ರಾಮಕೃಷ್ಣ ಮಠದ ಶ್ರೀ ಸ್ವಾಮಿ ತ್ಯಾಗೇಶ್ವರಾನಂದ ವಿತರಿಸಿ ಆಶೀರ್ವಚನ ನೀಡಲಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com