ಗಂಗೊಳ್ಳಿಯಲ್ಲಿ ಶಾಂತಿಸಭೆ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಇತ್ತೀಚಿಗೆ ನಡೆದ ಕೆಲವೊಂದು ಅಹಿತಕರ ಘಟನೆಗಳ ಬಗ್ಗೆ ಪದೇ ಪದೆ ಚರ್ಚಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಪುನಃ ಇಂಥ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಮತ್ತು ಎಲ್ಲ ಧರ್ಮದ ಜನರು ಶಾಂತಿ ಸಹಬಾಳ್ವೆಯ ಜೀವನ ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಕುಂದಾಪುರ ತಹಸೀಲ್ದಾರ್ ಗಾಯತ್ರಿ ನಾಯಕ್ ಹೇಳಿದರು. ಗುರುವಾರ ಗಂಗೊಳ್ಳಿಯ ಸುಧೀಂದ್ರ ಕೃಪಾ ಸದನದಲ್ಲಿ ಗಂಗೊಳ್ಳಿ ಗ್ರಾಪಂ ಹಾಗೂ ತಾಪಂ ಸದಸ್ಯರನ್ನೊಳಗೊಂಡ ಶಾಂತಿಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 

ದೂರು ನೀಡಿದ ಮಾತ್ರಕ್ಕೆ ಅಮಾಯಕರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಇಲಾಖೆ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಗಂಗೊಳ್ಳಿಯಲ್ಲಿ ಶಾಂತಿ ಕದಡಲು ಕಾರಣವಾಗಿರುವ ಅಂಶಗಳ ಬಗ್ಗೆ ಗಮನ ಹರಿಸಿ, ಶಾಂತಿ ಭಂಗಕ್ಕೆ ಯತ್ನಿಸುವ ವ್ಯಕ್ತಿಗಳ ಬಗ್ಗೆ ನಿಗಾ ಇರಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 

ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್. ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಪೂರ್ಣಿಮಾ ಖಾರ್ವಿ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುದರ್ಶನ, ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಗೋವರ್ಧನ್, ಗ್ರಾಮಕರಣಿಕ ರಾಘವೇಂದ್ರ ದೇವಾಡಿಗ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಡಿಸೋಜ, ಗ್ರಾಪಂ ಸದಸ್ಯರಾದ ಲಕ್ಷ್ಮೀಕಾಂತ ಮಡಿವಾಳ, ಗೋಪಾಲ ಖಾರ್ವಿ, ನಾಗರಾಜ ಖಾರ್ವಿ, ಬಿ. ಗಣೇಶ ಶೆಣೈ, ಲಕ್ಷ್ಮೀ ಗಾಣಿಗ, ಚಂದು, ಲಕ್ಷ್ಮೀ ಪೂಜಾರ‌್ತಿ, ಕೇಶವ ಖಾರ್ವಿ, ಗೀತಾ, ಲಲಿತಾ ಖಾರ್ವಿ, ಸರೋಜಿನಿ, ಸಾಯಿರಾ ಬಾನು, ಸುಶೀಲಾ ಶೇರುಗಾರ್, ಯೂನಿಸ್ ಸಾಹೇಬ್, ಅಬ್ದುಲ್ ಹಾದಿ, ಸಂತೋಷ್ ಕುಮಾರ್, ಕಮಲ ಮೊದಲಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com