ವೃತ್ತಿ ಮಾರ್ಗದರ್ಶನ ಶಿಬಿರ

ಗ೦ಗೊಳ್ಳಿ: ಅವಕಾಶಗಳು ಜೀವನದಲ್ಲಿ  ಹೇರಳವಾಗಿ ಸಿಗುತ್ತವೆ. ನಾವು ಅವುಗಳನ್ನು ಹುಡುಕಿಕೊ೦ಡು ಹೋಗಬೇಕು ಮತ್ತು ಅವಕಾಶಗಳು ತೆರೆದುಕೊ೦ಡಾಗ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಆಗ ನಮ್ಮ ಗುರಿಗಳನ್ನು ಮುಟ್ಟಲು ಸಾಧ್ಯ ಎ೦ದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಹೇಳಿದರು. ಅವರು ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಫ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರೋಟರಿ ಸಭಾ೦ಗಣದಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಶಿಬಿರದಲ್ಲಿ ಸ೦ಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸ.ವಿ. ಆ೦ಗ್ಲ ಮಾಧ್ಯಮ ಫ್ರೌಢಶಾಲೆಯ ಶ೦ಕರ್ ಖಾರ್ವಿ ವಿದ್ಯಾರ್ಥಿಗಳಿಗೆ ವಿವಿಧ ಅವಕಾಶಗಳ ಬಗೆಗೆ ಮಾಹಿತಿಯನ್ನು ನೀಡಿದರು.
    ಫ್ರೌಢಶಾಲಾ ಮುಖ್ಯೋಪಧ್ಯಾಯ ವಾಮನದಾಸ್ ಭಟ್ ಅಧ್ಯಕ್ಷತೆ ವಹಿಸಿದ್ದರು.ಸದಾನ೦ದ ವೈದ್ಯ ಸ್ವಾಗತಿಸಿದರು. ಗೋಪಾಲ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶ್ರೀಧರ ಗಾಣಿಗ ನಿರೂಪಿಸಿ ಆದಿನಾಥ ಕಿಣಿ ವ೦ದಿಸಿದರು.
ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com